25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

ನಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮವು ಜು. 20 ರಂದು ನಡೆಯಿತು.

50 ವಿವಿಧ ಬಗೆಯ ಹಣ್ಣುಗಳ ಗಿಡಗಳನ್ನು ನೆಡುವುದರ ಮೂಲಕ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಲಾಯಿಲ ವಲಯ ಮೇಲ್ವಿಚಾರಕರಾದ ಸುಶಾಂತ್ ಹಾಗೂ ಶ್ರೀಮತಿ ಶಶಿಕಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೂಕ್ತ ಮಾರ್ಗದರ್ಶನವನ್ನು ನೀಡಿದರು.


ನಡ ಗ್ರಾಮದ ಗ್ರಾಮಾಭಿವೃದ್ಧಿ ಒಕ್ಕೂಟದ ಅಧ್ಯಕ್ಷ ರಝಾಕ್ ರವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಳ್ತಂಗಡಿ ತಾಲ್ಲೂಕಿನ ಗ್ರಾಮಾಭಿವೃದ್ಧಿಯ ಕೃಷಿ ಅಧಿಕಾರಿ ಶ್ರೀರಾಮ್ ಕುಮಾರ್ ಮಾತನಾಡಿ ಅಂತರ್ಜಲ ಬತ್ತಿಹೋಗುತ್ತಿರುವ ಬಗ್ಗೆ ನಾವೆಲ್ಲಾ ಎಚ್ಚರಗೊಳ್ಳಬೇಕಾದ ಅಗತ್ಯತೆಯ ಬಗ್ಗೆ ವಿವರಿಸಿದರು. ಪ್ರತಿ ವಿದ್ಯಾರ್ಥಿ ತನ್ನ ಜನ್ಮದಿನವನ್ನು ಗಿಡ ನೆಡುವ ಮೂಲಕ ಆಚರಿಸುವಂತೆ ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಲಾ ಅಕ್ಷರ ಕೈತೋಟಕ್ಕೆ ವಿವಿಧ ತರಕಾರಿ ಬೀಜಗಳ ಬಿತ್ತನೆಯನ್ನು ಮಾಡಲಾಯಿತು. ಪರಿಸರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ನಡೆಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಶ್ರೀ ಸುಧಾಕರ, ಸದಸ್ಯರಾದ ಶ್ರೀ ಧರ್ಣೇಂದ್ರ ಜೈನ್, ಮುಖ್ಯ ಶಿಕ್ಷಕ ಶ್ರೀ ಯಾಕೂಬ್ ಎಸ್ , ಗ್ರಾಮಾಭಿವೃದ್ಧಿ ನಡ ಒಕ್ಕೂಟದ ಸದಸ್ಯರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ನಡ ಗ್ರಾಮದ ಸೇವಾ ನಿರ್ವಹಕಿ ಶ್ರೀಮತಿ ಶಕುಂತಳಾ ಇವರು ನಿರ್ವಹಿಸಿದ್ದರು.

Related posts

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!