38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿಪೂರ್ವ ವಿಭಾಗದ ವಿದ್ಯಾರ್ಥಿಸಂಘವನ್ನು ಮಂಗಳೂರು ಕಿಟ್ಟೆಲ್ ಸ್ಮಾರಕ ಪದವಿಪೂರ್ವ ಕಾಲೇಜು ಗೋರಿಗುಡ್ಡ ಪ್ರಾಂಶುಪಾಲರು ವಿಠಲ್‌ ಎ. ಉದ್ಘಾಟಿಸಿ ಮಾತನಾಡಿ ನಾಯಕತ್ವ ಗುಣಬೆಳೆಸಿಕೊಳ್ಳುವಲ್ಲಿ ವಿದ್ಯಾರ್ಥಿಸಂಘದ ಚುನಾವಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ವಿದ್ಯಾರ್ಥಿದೆಸೆಯಲ್ಲೇ ನಾಯಕತ್ವದ ಗುಣ ರೂಢಿಸಿಕೊಳ್ಳಿ’ ಎಂದು ಹೇಳಿದರು.

ಮುಖ್ಯ ಅತಿಥಿ ಮಡಂತ್ಯಾರು ರೋಟರಿಕ್ಲಬ್ ಅಧ್ಯಕ್ಷ ಶ್ರೀಧರ್ ರಾವ್ ಮಾತನಾಡಿ ವಿದ್ಯೆಯೊಂದಿಗೆ ವಿನಯವಂತರಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹಾರೈಸಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯ ಜಯರಾಮ ಶೆಟ್ಟಿ ಮಾತನಾಡಿ ವಿದ್ಯಾರ್ಥಿಸಂಘಕ್ಕೆ ಶುಭಾಶಯ ಕೋರಿದರು, ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಹೈಸ್ಕೂಲ್ ವಿಭಾಗದ ಉಪಪ್ರಾಂಶುಪಾಲರಾದ ಉದಯಕುಮಾರ್ ಮತ್ತು ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯೋಪಧ್ಯಾಯರಾದ ಸುರೇಶ್‌ ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಮಡಂತ್ಯಾರು ಗ್ರಾಮಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭಾ ಅಧ್ಯಕ್ಷತೆ ವಹಿಸಿ ಶುಭ ಕೋರಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ದಿವಾಕರ್ ಶೆಟ್ಟಿ ಚುನಾಯಿತ ವಿದ್ಯಾರ್ಥಿಗಳಿಗೆ ಗುರುತುಪತ್ರ ವಿತರಿಸಿದರು. ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಮತ್ತು ಶ್ರೀಮತಿ ಪಾರ್ವತಿ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ. ಸರೋಜಿನಿ ಅಚಾರ್ ಪ್ರಾಸ್ತಾವಿಕನುಡಿಗಳೊಂದಿಗೆ ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಭೋಧಿಸಿದರು. ರಸಾಯನಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಿನುತಾ ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶ್ವೇತ ವಂದನಾರ್ಪಣೆಗೈದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya
error: Content is protected !!