25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಉಜಿರೆ :”ವಿದ್ಯಾರ್ಥಿಗಳು ನಿಂತ ನೀರಾಗಬಾರದು, ಹರಿಯುವ ನೀರಾಗಬೇಕು. ತಮ್ಮ ಜೀವನದಲ್ಲಿ ಎಂದೆಂದಿಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶಕ್ಕೆ ಸಂಪನ್ಮೂಲವಾಗಬೇಕು” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸರ್ ಇವರು ಹೇಳಿದರು.

ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.18 ರಂದು ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವೇದಿಕೆಯಲ್ಲಿ ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ರಾಹುಲ್ ಉಪಸ್ಥಿತರಿದ್ದರು.

ಶಿಕ್ಷಕರಾದ ಸವಿತಾ ವೇದಪ್ರಕಾಶ್ ಮತ್ತು ಗಣೇಶ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸುಶಾಂತ್ ಮತ್ತು ಅಭಿಷ್ಟ ನಿರೂಪಣೆ ಮತ್ತು ವಿದ್ಯಾರ್ಥಿನಿ ವಾತ್ಸಲ್ಯ ವಂದಿಸಿದರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!