23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಲ್ಲಿ 135 ಸ್ಥಾನಗಳನ್ನು ಪಡೆದು ಸರ್ಕಾರವನ್ನು ರಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕರಾವಳಿ ಭಾಗ) ದಲ್ಲಿ ಕಾಂಗ್ರೆಸ್ ಪಕ್ಷ ಸ್ವಲ್ಪ ಹಿನ್ನಡೆಯನ್ನು ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲಾಗಿ 2 ವಿಧಾನಸಭಾ ಕ್ಷೇತ್ರದಲ್ಲಿ ವಿಜಯಿಯಾಗಿದೆ ಎಂದು ಅಲ್ಪಸಂಖ್ಯಾತ ನಗರ ಬ್ಲಾಕ್ ಅಧ್ಯಕ್ಷ ಸಲೀಂ ಗುರುವಾಯನಕೆರೆ ಹೇಳಿದರು.

ಅವರು ಜು.21 ರಂದು ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘ ಏಕತಾ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಮ್ಮ ಜಿಲ್ಲೆಯಲ್ಲಿ ಚುನಾವಣೆಯಲ್ಲಿ ಆದ ಸೋಲು-ಗೆಲುವಿನ ಪರಾಮರ್ಶೆಯನ್ನು ನಡೆಸಲು ಕೆ.ಪಿ.ಸಿ.ಸಿ ಯ ಸೂಚನೆ ಮೇರೆಗೆ ಸಮಿತಿಯೊಂದನ್ನು ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂ ರವರ ನೇತೃತ್ವದ ಸಮಿತಿಯಲ್ಲಿ ಪುತ್ತೂರಿನ ಮಾಜಿ ಶಾಸಕಿಯಾದ ಶ್ರೀಮತಿ ಶಕುಂತಲಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಮಮತಾಗಟ್ಟಿ, ಕಾಂಗ್ರೆಸ್ ಮುಖಂಡರಾದ ಬಂಟ್ವಾಳದ ಅಶ್ವಿನ್ ಕುಮಾರ್ ರೈ ಇವರನ್ನೊಳಗೊಂಡ ಸಮಿತಿ ಜು. 14 ರಂದು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕೆ.ಪಿ.ಸಿ.ಸಿ ಸದಸ್ಯರು, ಡಿ.ಸಿ.ಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳಲ್ಲಿ ಅಭಿಪ್ರಾಯವನ್ನು ಸಂಗ್ರಹಿಸಲು ಮತ್ತು ಪರಾಮರ್ಶೆಯನ್ನು ನಡೆಸಲು ಆಗಮಿಸಿದ್ದರು. ಆಗಮಿಸಿದ ಗಣ್ಯರನ್ನು ಸ್ವಾಗತಿಸಿದ ನಗರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಅವರು ಮಾತನಾಡಿ ಈ ಸಭೆಗೆ ನಾವು ಆಹ್ವಾನಿಸದ ಮುಖಂಡರುಗಳಲ್ಲದೆ ಕಾರ್ಯಕರ್ತರು ಕೂಡ ಆಗಮಿಸಿದ್ದು ಎಲ್ಲರಿಗೂ ಅವರವರ ಅಭಿಪ್ರಾಯವನ್ನು ತಿಳಿಸಲು ಅಥವಾ ಲಿಖಿತ ರೂಪದಲ್ಲಿ ಕೊಡಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮುಂದೆ ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂ ಮಾತನಾಡಲು ಎದ್ದು ನಿಂತ ಸಂದರ್ಭದಲ್ಲಿ ಧಿಡಿರನೇ ಹತ್ತಿಪ್ಪತ್ತು ಮಂದಿಯ ಗುಂಪು ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿ ಮಾಜಿ ರಾಜ್ಯಸಭಾ ಸದಸ್ಯರಾದ ಕೆ ಬಿ ಇಬ್ರಾಹಿಂ, ಮಾಜಿ ಶಾಸಕರಾದ ಕೆ ವಸಂತ ಬಂಗೇರ, ಮಾಜಿ ಸಚಿವರಾದ ಕೆ ಗಂಗಾಧರ ಗೌಡರವರು ಬೇರೆ ಬೇರೆ ಕಾರಣಗಳಿಗೆ ಬೆಂಗಳೂರಿಗೆ ಹೋದ ಸಂದರ್ಭದಲ್ಲಿ ಒಟ್ಟಾಗಿ ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರ ಜೊತೆ ನಿಂತು ತೆಗೆದ ಫೋಟೋವನ್ನು ತೋರಿಸಿಕೊಂಡು ಗುಂಪಿನಲ್ಲಿ ಬಂದ ರಾಜೇಶ್ ಭಟ್ ಸವಣಾಲು, ಸಚಿನ್ ನೂಜೋಡಿ, ಪ್ರವೀಣ್ ಫೆರ್ನಾಂಡಿಸ್ ಉಜಿರೆ (ಹಳ್ಳಿಮನೆ), ಮತ್ತಿತ್ತರು ಪರಾಮರ್ಶೆ ಸಮಿತಿಯ ಮುಖ್ಯಸ್ಥರಾದ ಇಬ್ರಾಹಿಂ ರವರು ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಅವರನ್ನು ಹೊರಗೆ ಕಳುಹಿಸಿ ಎಂದು ಏಕವಚನದಲ್ಲಿ ಮಾತನಾಡಿ ಅವಾಚ್ಯ ಶಬ್ದಗಳಲ್ಲಿ ಬೈದು ಓರ್ವ ಕಾಂಗ್ರೆಸ್ಸಿನ ಹಿರಿಯ ನಾಯಕರಿಗೆ ಅದರಲ್ಲೂ ಅಲ್ಪಸಂಖ್ಯಾತ ಸಮುದಾಯದ ದೊಡ್ಡ ನಾಯಕನಿಗೆ ಅಗೌರವ ಮಾಡಿರುವುದನ್ನು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕವು ಖಂಡಿಸುತ್ತದೆ ಹಾಗೂ ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಪಕ್ಷದ ವರಿಷ್ಟರಿಗೆ ತಿಳಿಸಿರುತ್ತೇವೆ ಅವರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರುಗಳಾದ ನಝೀರ್ ಬಿ.ಎ, ಆಶ್ರಫ್ ನೆರಿಯ, ಪ್ರಶಾಂತ್ ವೇಗಸ್, ಅಬ್ದುಲ್ ರಹಿಮಾನ್ ಪಡ್ಪು, ಖಾಲಿದ್ ಉಜಿರೆ, ರಫಿ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
error: Content is protected !!