ಉಜಿರೆ :”ವಿದ್ಯಾರ್ಥಿಗಳು ನಿಂತ ನೀರಾಗಬಾರದು, ಹರಿಯುವ ನೀರಾಗಬೇಕು. ತಮ್ಮ ಜೀವನದಲ್ಲಿ ಎಂದೆಂದಿಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶಕ್ಕೆ ಸಂಪನ್ಮೂಲವಾಗಬೇಕು” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸರ್ ಇವರು ಹೇಳಿದರು.
ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.18 ರಂದು ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವೇದಿಕೆಯಲ್ಲಿ ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ರಾಹುಲ್ ಉಪಸ್ಥಿತರಿದ್ದರು.
ಶಿಕ್ಷಕರಾದ ಸವಿತಾ ವೇದಪ್ರಕಾಶ್ ಮತ್ತು ಗಣೇಶ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸುಶಾಂತ್ ಮತ್ತು ಅಭಿಷ್ಟ ನಿರೂಪಣೆ ಮತ್ತು ವಿದ್ಯಾರ್ಥಿನಿ ವಾತ್ಸಲ್ಯ ವಂದಿಸಿದರು.