24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

ಅಮೇರಿಕದ ನ್ಯೂಜೆರ್ಸಿಯ ಫ್ಯಾಂಕ್ಲಿನ್‌ ಟೌನ್ ಶಿಪ್‌ನಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಲಭೈರವೇಶ್ವರ ದೇಗುಲ ನಿರ್ಮಾಣದ ಕಾಮಗಾರಿಯನ್ನು ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಪರಿಶೀಲಿಸಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೇರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಈ ಟೌನ್ ಶಿಪ್‌ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣವಾಗುತ್ತಿರುವ 5 ಸಾವಿರ ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಲಾಗಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ.ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!