ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಡ : “ನಮ್ಮ ಸಮಾಜದ ವ್ಯವಸ್ಥೆಯಲ್ಲಿ ತಾಯಿ ನಿಜವಾದ ನಾಯಕಿ. ತಾಯಿಯು ದುಡಿಮೆಯೊಂದಿಗೆ, ಕುಟುಂಬದ ನಾಯಕತ್ವ ವಹಿಸಿಕೊಂಡು, ಕುಟುಂಬವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗುತ್ತಾಳೆ”ಎಂದು ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸನ್ನಿ ಕೆ. ಎಂ. ಅಭಿಪ್ರಾಯ ಪಟ್ಟರು.

ಅವರು ನಡ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಗೈದು, ನಾಯಕನಾದವನು ಪರಸ್ಪರ ವಿಶ್ವಾಸದೊಂದಿಗೆ ತನ್ನ ಕರ್ತವ್ಯ ನಿರ್ವಹಿಸಬೇಕು. ಹುಟ್ಟಿನಿಂದ ಯಾರೂ ನಾಯಕನಾ ಗುವುದಿಲ್ಲ. ಆದರೆ ಅವಕಾಶ ಸಿಕ್ಕಿದಾಗ ನಮ್ಮ ನಾಯಕತ್ವವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ , ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಘಟಕ, ರೇಂಜರ್ಸ್ ಘಟಕ, ಮತದಾರರ ಸಾಕ್ಷರತಾ ಕ್ಲಬ್, ಮಾದಕ ವ್ಯಸನ ಮುಕ್ತ ಘಟಕಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಜಿತ್ ಆರಿಗ, ಸದಸ್ಯ ಪ್ರಭಾಕರ ಮಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ. ಯವರು ಸ್ವಾಗತಿಸಿ ,ರಾಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಡಿ. ಪ್ರಸ್ತಾವನೆ ಗೈದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿ.ವಿ.ಯವರು ಧನ್ಯವಾದ ಸಲ್ಲಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪವಿತ್ರ ಸಹಕರಿಸಿದರು. ವಿದ್ಯಾರ್ಥಿನಿಯರಾದ ಸವಿತಾ, ಪ್ರಾಪ್ತಿ, ಸೌಮ್ಯ, ಶ್ವೇತಾ ಪ್ರಾರ್ಥಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಮೋಹನ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Leave a Comment

error: Content is protected !!