38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿರುವ ಶಾಸಕರು, 2012 ಅಕ್ಟೋಬರ್ 9ರಂದುರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಅದರ ವಿಚಾರವಾಗಿ ಅದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಘನ ಸರ್ಕಾರ 2013 ರಲ್ಲಿ ಈ ಪ್ರಕರಣವನ್ನು ಸಿ.ಬಿ.ಐ. ಗೆ ಒಪ್ಪಿಸಿತ್ತು. ಅಲ್ಲಿಂದ 2023 ರವರೆಗೂ ನಡೆದ ಸಿ.ಬಿ.ಐ, ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ.

ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟನೊಳಗೆ ತಂದು ಶಿಕ್ಷೆ ನೀಡಲು ಆಡಳತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲ್ಲೂಕಿನ ನಾಗರೀಕ ಬಂಧುಗಳದ್ದಾಗಿದೆ. ಆದ್ದರಿಂದ ನಾಗರಿಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರವು ಕುಮಾರಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತ ಸಹೋದರಿ ಸೌಜನ್ಯಳಗೆ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನ ನೆಲೆಯಲ್ಲ ಹಾಗೂ ವೈಯಕ್ತಿಕವಾಗಿ ಆಗ್ರಹಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ನೀಡುವ ಸಂದರ್ಭದಲ್ಲಿ ‌ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Related posts

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya
error: Content is protected !!