25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ನಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.22 ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮುಂಡಾಜೆಯ ಕಲಾಕುಂಜ ಆರ್ಟ್ಸ್ ನ ಸಂಯೋಜಕರಾದ ಜಯರಾಮ್ ರವರು, “ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಗ್ಗೆ ಜಾಗೃತಿಯನ್ನು ಹೆಚ್ಚಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಎ ಚ್ಚೆತ್ತರೆ ಸುದೃಢ ಸಮಾಜದ ನಿರ್ಮಾಣವಾಗುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಒಕ್ಕೂಟದ ಅಧ್ಯಕ್ಷರಾದ ಬಿಎ ರಝಕ್ ವಹಿಸಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ತನಿಯಪ್ಪ ಗೌಡ, ನಡ ಗ್ರಾಮದ ಸೇವಾಪ್ರತಿನಿಧಿ ಶ್ರೀಮತಿ ಶಕುಂತಲ , ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶ್ರೀಮತಿ ಲಿಲ್ಲಿ ಪಿ. ವಿ. ಮತ್ತು ಶ್ರೀಮತಿ ವಸಂತಿ ಪಿ. ಯವರು ಕಾರ್ಯಕ್ರಮಕ್ಕೆ ಸಹಕರಿಸಿದರು.
ವಿದ್ಯಾರ್ಥಿನಿಯರಾದ ಸವಿತಾ, ಪ್ರಾಪ್ತಿ, ಯಕ್ಷಿತಾ ಪ್ರಾರ್ಥನೆ ಗೈದರು. ಶ್ರೀ ಕ್ಷೇ. ಧ. ಗ್ರಾಮಾಭಿವೃದ್ಧಿ ಯೋಜನೆಯ ಲಾಯಿಲ ವಿಭಾಗದ ಮೇಲ್ವಿಚಾರಕರಾದ ವಂದಿಸಿದರು. ಉಪನ್ಯಾಸಕರಾದ ಮೋಹನ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya
error: Content is protected !!