April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

ಬೆಳ್ತಂಗಡಿ: ಮುಂಬಯಿ ಮಹಾನಗರದಲ್ಲಿ ಕನ್ನಡಿಗರ ಸಾಂಸ್ಕೃತಿಕ ಕಲೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಸಹಯೋಗದಲ್ಲಿ ನೀಡುವ ‘ಸಹಕಾರ ಭೂಷಣ’ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಹಾಗೂ ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.

ಮು೦ಬಯಿಯ ವಿವಿಧ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿ ಜು. 29ರಂದು ಮುಂಬಯಿ ಕುರ್ಲಾ ಬಂಟರ ಭವನದಲ್ಲಿ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ ಹಾಗೂ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘವು ಸ್ಥಾಪಿಸಿದ ಪ್ರಥಮ ಸಹಕಾರ ಭೂಷಣ ಪ್ರಶಸ್ತಿಯನ್ನು ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಸ್ವೀಕರಿಸಲಿದ್ದಾರೆ.

ಸಹಕಾರ ರಂಗದಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾದರಿಯಾಗಿರುವ ಡಾ| ಎಂ.ಎನ್‌. ರಾಜೇಂದ್ರ ಕುಮಾರ್ ಅವರು ಎಸ್ ಸಿಡಿಸಿಸಿ ಬ್ಯಾಂಕನ್ನು 29 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಎಸ್‌ ಸಿಡಿಸಿಸಿ ಬ್ಯಾಂಕನ್ನು ರಾಷ್ಟ್ರೀಕೃತ ಬ್ಯಾಂಕುಗಳ ಸ್ಥಾನಮಾನಕ್ಕೇರಿಸಿದ ಹೆಗ್ಗಳಿಕೆ ಅವರದ್ದು, ವಿಶಿಷ್ಟ ಕಾರ್ಯ ವೈಖರಿಯಿಂದ ಎಸ್‌ ಸಿಡಿಸಿಸಿ ಬ್ಯಾಂಕ್‌ ಹೊಸಹೊಸ ಆವಿಷ್ಕಾರಗಳೊಂದಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya
error: Content is protected !!