23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಪ್ರದೇಶದ ಜಾಕೋಬ್ ಮೊನಿಸ್ ರವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡು ಗೋಡೆ ಬಿರುಕು ಬಿಟ್ಟಿದ್ದು ಅಪಾರ ನಷ್ಟ ಉಂಟಾಗಿದೆ, ಅದೃಷ್ಟವಶಾತ್ ಮನೆಯಲ್ಲಿ ವಾಸ್ತವ್ಯವಿದ್ದ ಜಾಕೋಬ್ ಮೊನಿಸ್ ರವರು ಪ್ರಾಣಾಪಾಯದಿಂದ ಪಾರಾದ ಘಟನೆ ಜು.22ರಂದು ನಡೆದಿದೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಇಂದಬೆಟ್ಟು ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಜಾಕೋಬ್ ಮೊನಿಸ್ ರವರಿಗೆ ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!