ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಬೆಳ್ತಂಗಡಿ: ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸಿ ಮಹಿಳೆಯರಿಗೆ ಘನತೆಯ ಬದುಕನ್ನು ಖಾತ್ರಿಗೊಳಿಸಲು ಮಣಿಪುರದ ಸಂತ್ರಸ್ತರ ಜೊತೆ ನಾವಿದ್ದೇವೆ ಎಂದು ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆಯು ಜು.24ರಂದು ಬೆಳ್ತಂಗಡಿಯಲ್ಲಿ ನಡೆಯಿತು.

ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ತಹಶೀಲ್ದಾರ ಕಚೇರಿಯ ವರೆಗೆ ಮಳೆಯನ್ನು ಲೆಕ್ಕಿಸದೆ ಧಮ೯ಗುರುಗಳು,‌ಧಮ೯ಭಗೀನಿಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪುರುಷರು, ಮಹಿಳೆಯರು ಪ್ರತಿಭಟನಾ ರ್ಯಾಲಿ ಯನ್ನು ನಡೆಸಿದರು. ಪ್ರತಿಭಟನೆಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.‌‌ ಪ್ರತಿಭಟನೆಯನ್ನು ಉದ್ದೇಶಿಸಿ ಬೆಳ್ತಂಗಡಿ ಧಮ೯ಪ್ರಾಂತ್ಯದ ಧಮಾ೯ಧ್ಯಕ್ಷ ಬಿಷಫ್ ಲಾರೆನ್ಸ್ ಮುಕ್ಕುಯಿ ಅವರು ಮಾತನಾಡಿ ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌಜ೯ನ್ಯವನ್ನು ಖಂಡಿಸಿ ‌ಕೂಡಲೇ ಕೇಂದ್ರ ಸರ್ಕಾರ ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ,, ಎಂಎಲ್ಸಿ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಜಿ.ಪಂ ಮಾಜಿ ಅಧ್ಯಕ್ಷ ಶಾಲೆಟ್ ಪಿಂಟೋ, ಸುಪ್ರಿಯಾ, ಬೆಳ್ತಂಗಡಿ ಚಚ್೯ನ ಧಮ೯ಗುರು ವಾಲ್ಟರ್ ಡಿ ಮೆಲ್ಲೋ ಮಾತನಾಡಿ ಸಣ್ಣ ರಾಜ್ಯ ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ಗಲಾಟೆ, ದೊಂಬಿ ನಡೆಯು ತ್ತಿದ್ದರೂ,‌ ಅಲ್ಲಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿದರು. ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌಜ೯ನ್ಯವನ್ನು ತಡೆಗಟ್ಟಿ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ನಿಮಿ೯ಸಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.ಮಳೆಯನ್ನು ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಭಾಗವಹಿಸಿದರು.

Leave a Comment

error: Content is protected !!