ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ.ಹಾಗೂ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ವತಿಯಿಂದ, ಸ.ಪ್ರೌಢ ಶಾಲೆ ಪೆರ್ಲ-ಬೈಪಾಡಿಯಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು,

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಬೆಳ್ತಂಗಡಿ ತಾಲೂಕು ಜನಜಗೃತಿ ವೇದಿಕೆ ಅಧ್ಯಕ್ಷರಾದ ಕಾಸಿಂ ಮಲ್ಲಿಗೆಮನೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಗೃತಿ ವೇದಿಕೆಯ ಶಿಬಿರಾಧಿಕಾರಿ ರಾಜೇಶ್ ರವರು,ಒಬ್ಬ ವಿದ್ಯಾರ್ಥಿಯ ಬದುಕಿನಲ್ಲಿ ದುಶ್ಚಟ ಅಂಟಿಕೊಂಡಾಗ ಇಡೀ ಬದುಕೇ ನಾಶವಾಗುತ್ತದೆ, ಜೀವನದಲ್ಲಿ ದುಶ್ಚಟ ದುರಭ್ಯಾಸಗಳಿಗೆ ಬಲಿಯಾಗದೆ, ಶಿಕ್ಷಣದ ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿ,ತಂದೆ ತಾಯಿಗಳಿಗೆ ಉತ್ತಮ ಮಗನಾಗಿ ಜೀವನವನ್ನು ರೂಪಿಸಿಕೊಳ್ಳಬೇಕು, ಸಮಾಜದಲ್ಲಿ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಾಲೆಯ ಹಿರಿಯ ಶಿಕ್ಷಕರಾದ ಕೊರಗಪ್ಪ ಮಾತನಾಡುತ್ತಾ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೀಡಿದ ಈ ಕಾರ್ಯಕ್ರಮವು ಮಕ್ಕಳಿಗೆ ತುಂಬಾ ಪ್ರಯೋಜನ ಆಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಬೆಳಾಲು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ರವರು ಶುಭ ಹಾರೈಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕರರಾದ ಮಹೇಶ್ ನಡೆಸಿ ಶಾಲಾ ಶಿಕ್ಷಕರಾದ ವಿಜಯ ಕುಮಾರ್ ರವರು ಸ್ವಾಗತಿಸಿ.

ಉಜಿರೆ ವಲಯ ಮೇಲ್ವಿಚಾರಾದ ಶ್ರೀಮತಿ ವನಿತಾರವರು ಧನ್ಯವಾದವಿತ್ತರು.

Leave a Comment

error: Content is protected !!