24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!