September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

ಉಜಿರೆ : ಉಜಿರೆ ಹಳೆಪೇಟೆಯ 63 ವರ್ಷ ಪ್ರಾಯದ ಎ. ರಾಜರಾಮ ನಾಯಕ್ ಎಂಬವರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಸೊಂಟ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೊಂಟದ ಕೀಳು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಎರಡು ಶಸ್ತ್ರಚಿಕಿತ್ಸೆಗಳನ್ನು ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಶತಾನಂದ ಪ್ರಸಾದ್ ರಾವ್ ಡಾ| ಹರೀಶ್ ಬಿ.ಎಸ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರೀತ್ ಆರ್ ಶೆಟ್ಟಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿದರು.
ಟೋಟಲ್ ನೀ ರಿಪ್ಲೇಸ್‌ಮೆಂಟ್ ಹಾಗೂ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕೃತಕ ಲೋಹದ ಕೀಲುಗಳನ್ನು ಅಳವಡಿಸಲಾಗುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈಗಾಗಲೇ ಹಲವಾರು ಟೋಟಲ್ ನೀ ರಿಪ್ಲೇಸ್‌ಮೆಂಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಹಾಗೂ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.
ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತಿದೆ. ಹೈಟೆಕ್ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೇವೆ ಹಾಗೂ ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಗ್ರಾಮೀಣ ಜನತೆಗೆ ಮಿತದರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಹರ್ಷ ವ್ಯಕ್ತಪಡಿಸಿದರು ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya
error: Content is protected !!