24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ “ಮಾನ್ಸೂನ್ ಮೇನಿಯ -2023″ಎಂಬ ವಿಶಿಷ್ಟ ಆಚರಣೆಯು ನಡೆಯಿತು.

ಇಂದಿನ ಪೀಳಿಗೆಯ ಮಕ್ಕಳಿಗೆ ಕೃಷಿ ಕ್ಷೇತ್ರದ ಚಟುವಟಿಕೆಗಳು ಹಾಗೂ ಮಳೆಗಾಲದಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಪರಿಚಯಿಸುವ ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಸೈಯದ್ ಅಯ್ಯುಬ್ ವಹಿಸಿಕೊಂಡಿದ್ದರು. ಅತಿಥಿಗಳಾಗಿ ರಝ ಫ್ರೆಂಡ್ಸ್ ಮಂಜೊಟ್ಟಿ ಇದರ ಅಧ್ಯಕ್ಷರಾದ ಮೊಹಮ್ಮದ್ ಸಲೀಂ,ಆಡಳಿತ ಟ್ರಸ್ಟಿನ ಕೋಶಾಧಿಕಾರಿಯಾದ ಸೈಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಪ್ರಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರು ” ಮಕ್ಕಳು ಪಠ್ಯ ಶಿಕ್ಷಣದ ಜೊತೆಗೆ ಕೃಷಿ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಅಧ್ಯಕ್ಷ ನೆಲೆಯಿಂದ ಮಾತನಾಡಿದ ಸೈಯದ್ ಆಯುಬ್ ” ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಶಿಕ್ಷಣವನ್ನು ನೀಡುವ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕೃಷಿ ಚಟುವಟಿಕೆಗಳಲ್ಲಿ ಒಂದಾದ ಭತ್ತದ ಕೃಷಿ, ಪರಿಕರಗಳು, ಹಿಂದಿನ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಳತೆಯ ಕಳಸೆ, ಅಕ್ಕಿ ಮುಡಿ ಕಟ್ಟುವುದು ನೇಗಿಲು ನೊಗ ಹಾಗೂ ಕೃಷಿ ಕೆಲಸ ಮಾಡುವಾಗ ಬಳಸುತ್ತಿದ್ದ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಾಲಾ ಶಿಕ್ಷಕರು ತಯಾರಿಸಿದ್ದ ವಿವಿಧ ರೀತಿಯ ಮಳೆಗಾಲದ ಖಾದ್ಯಗಳ ಪ್ರದರ್ಶನ ಹಾಗೂ ಅವುಗಳನ್ನು ತಯಾರಿಸುವ ವಿಧಾನವನ್ನು ಮಕ್ಕಳಿಗೆ ವಿವರಿಸಿ ಕೊಟ್ಟರು. ಶಾಲೆಯ ಮೈದಾನದಲ್ಲಿ ತಯಾರಿಸಿದ ಗದ್ದೆಯಲ್ಲಿ ಮಕ್ಕಳಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕರುಗಳು ನೇಜಿ ನೆಡುವ ಪ್ರಾತ್ಯಕ್ಷತೆಯನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

ಗದ್ದೆಯಲ್ಲಿ ಬೀಜ ಬಿತ್ತನೆಯನ್ನು ಮಾಡುವುದರ ಮೂಲಕ ಭತ್ತದ ಕೃಷಿಯನ್ನು ಪ್ರಾರಂಭಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಯುತ ಸುಂದರ್ ನಾಯ್ಕ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿ ಶ್ರೀಮತಿ ನುಸೈಬ ಇವರು ಧನ್ಯವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related posts

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!