September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

ಉಜಿರೆ: ‘ ಯುದ್ದವೆಂದರೆ ರೋಚಕವಾದದ್ದು ಅದರಲ್ಲೂ ಕಾರ್ಗಿಲ್ ಯುದ್ಧ ಹಾಗೂ ವಿಜಯವು ಅತಿರೋಚಕ . ಕಾರ್ಗಿಲ್ ಪ್ರದೇಶವು ಯಾವಾಗಲೂ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶ ಹಾಗೆಯೇ ಹಿಮದಿಂದ ಅನೇಕ ಖಾಯಿಲೆಗಳಿಗೆ ಆಸ್ಪದವಿರುವ ಪ್ರದೇಶವೂ ಆಗಿದೆ. ಇಲ್ಲಿ ಪಾಕಿಸ್ತಾನ ಆಕ್ರಮಣ ಮಾಡಿದಾಗ ನಮ್ಮ ಭಾರತೀಯ ಸೇನೆಯ ಯೋಧರು ಹೋರಾಡಿ ವಿಜಯ ಸಂಪಾದಿಸಿದ್ದು ಅವಿಸ್ಮರಣೀಯ ‘ ಎಂದು ಭಾರತೀಯ ಸೇನೆಯ ಮಾಜಿ ಯೋಧರಾದ ಉಜಿರೆ ಬಡೆಕೊಟ್ಟುವಿನ ವಿಕ್ಟರ್ ಕ್ರಾಸ್ತಾ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆಯ ಸಿದ್ದವನದಲ್ಲಿ ನಡೆದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇವರು ವಿದ್ಯಾರ್ಥಿಗಳಿಗೆ ಸೇನೆಗೆ ಸೇರುವ ಬಗ್ಗೆ ಮಾಹಿತಿ ನೀಡಿದರು. ಸೇನೆಯಲ್ಲಿ ಇದ್ದರೂ ಬೆಲೆ ಇದೆ ಸತ್ತರೂ ಬೆಲೆ ಇದೆ ಎಂಬುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ‘ ಯುವಕರಲ್ಲಿ ದೇಶ ಪ್ರೇಮ ಹೆಚ್ಚಾಗಬೇಕಾದರೆ ಹಾಗೂ ಸೈನಿಕರಿಗೆ ಗೌರವ ಸಲ್ಲಿಸಲು ಕಾರ್ಗಿಲ್ ದಿನದಂತಹ ಕಾರ್ಯಕ್ರಮ ಅಗತ್ಯ ‘ ಎಂದು ನುಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ವಿದ್ಯಾರ್ಥಿ ಬೋರೇಶ್ ಅವರು ಕಾರ್ಗಿಲ್ ವಿಜಯ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಿದ್ದವನ ಗುರುಕುಲದ ಪಾಲಕರಾದ ಮಾಚಾರು ಕೇಶವ ನಾಯ್ಕ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾ.ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ಸ್ವಾಗತಿಸಿ , ಆದಿತ್ಯ ವಂದಿಸಿದರು. ದಿವಿನ್ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya
error: Content is protected !!