April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

ಕಕ್ಕಿಂಜೆ: ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಗೆ  ನಾರ್ಥ್ ಕೆರೊಲಿನಾ  ವಿ.ವಿ.ಯ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ಒಟ್ಟು  15 ಜನರ   ತಂಡವು  ಮಂಗಳೂರಿನ ದೇರಳಕಟ್ಟೆ ಯೇನೆಪೊಯ ದಂತವೈದ್ಯಕೀಯ ಕಾಲೇಜು  ಇವರ ಸಹಕಾರದೊಂದಿಗೆ ಜು 25  ರಂದು  ಭೇಟಿ ನೀಡಿ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ  “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿ  ಗ್ರಾಮಾಂತರ ಆರೋಗ್ಯ ಸೇವೆಯ ಬಗೆಗೆ ಮಾಹಿತಿ ಪಡೆದರು.

ಶ್ರೀ ಕೃಷ್ಣ  ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಸವಿವರ ಮಾಹಿತಿ ನೀಡಿದರು. ವಿದ್ಯಾರ್ಥಿ ತಂಡ ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ  ಸೇವೆಯ ಪರಿಪೂರ್ಣ ಅನುಭವ ಪಡೆದು ಸಂತೃಪ್ತಿಗೊಂಡರು . 

ಈ ಸಂದರ್ಭದಲ್ಲಿ  ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ.ವಂದನಾ ಎಂ ಇರ್ವತ್ರಾಯ, ವೈದ್ಯಾಧಿಕಾರಿಗಳಾದ ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ,ದಂತ  ವೈದ್ಯಾಧಿಕಾರಿ ಡಾ.ಪ್ರಕೃತಿ ಶೆಟ್ಟಿ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವೈದ್ಯಕೀಯ ವಿದ್ಯಾರ್ಥಿಗಳ ತಂಡ ಶ್ರೀ ಕೃಷ್ಣ ಆಸ್ಪತ್ರೆಯ ಸೇವೆಯ ಬಗೆಗೆ ಮೆಚ್ಚುಗೆ  ವ್ಯಕ್ತಪಡಿಸಿ, ವೈದ್ಯರು ಹಾಗು ಸಿಬ್ಬಂದಿಗಳನ್ನು ಅಭಿನಂದಿಸಿದರು.

Related posts

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya
error: Content is protected !!