April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 28 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 50 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

Related posts

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya
error: Content is protected !!