32.9 C
ಪುತ್ತೂರು, ಬೆಳ್ತಂಗಡಿ
April 1, 2025
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ.

ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಅನಿವಾರ್ಯ ನಿರ್ಮಾಣವಾಗಿದೆ.

ಅರಣ್ಯವಾಸಿಗಳಿಗೆ ಸಂಚಾರಿ ವಾಹನದ ಮೂಲಕ ಅಳಂಬ ಪ್ರದೇಶಕ್ಕೆ ಪಡಿತರ ವಿತರಣೆಯಾಗುತ್ತಿತ್ತು. ಈ ಸೇತುವೆ ಕುಸಿತವಾಗಿರುವುದರಿಂದ ಇನ್ನು ಪಡಿತರ ಸೇರಿದಂತೆ ಇನ್ನಿತರ ವಸ್ತುಗಳನ್ನೂ ಕಾಲ್ನಡಿಗೆಯಲ್ಲೇ ಹೊತ್ತೊಯ್ಯುವ ಅನಿವಾರ್ಯ ಬರಲಿದೆ. ತುರ್ತು ಸಂದರ್ಭಗಳಲ್ಲೂ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.

ಮೂರು ವರ್ಷದ ಹಿಂದೆ ಕುಕ್ಕುಜೆ ಸಮೀಪದ ಸೇತುವೆ ಇದೇ ರೀತಿ ಕುಸಿತವಾಗಿತ್ತು. ನಂತರ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಅದೇ ಸಂದರ್ಭದಲ್ಲಿ ಕಾಡಬಾಗಿಲು ಸೇತುವೆಯನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆದರೂ ಹೊಸ ಸೇತುವೆ ನಿರ್ಮಾಣಕ್ಕೆ ಮುಂದಾಗಿರಲಿಲ್ಲ. ಇದೀಗ ಸೇತುವೆ ಕುಸಿತ ಆಗಿರುವುದರಿಂದ ಸಂಪರ್ಕವೇ ಸಾಧ್ಯವಿಲ್ಲದಂತಾಗಿದೆ.

ಕಾಡಬಾಗಿಲು ಸೇತುವೆಯನ್ನು ತಕ್ಷಣವೇ ನಿರ್ಮಾಣ ಮಾಡಬೇಕು. ಅರಣ್ಯವಾಸಿಗಳಿಗೆ ಸಂಚರಿಸಲು ತೊಂದರೆಯಾಗದಂತೆ ಕ್ರಮ ವಹಿಸಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಸ್ಥಳೀಯ ನಿವಾಸಿ ಚೀಂಕ್ರ ಮಲೆಕುಡಿಯ ಬರೆಂಗಾಡಿ ಒತ್ತಾಯಿಸಿದರು.

Related posts

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!