April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ದೇಶದ ಆಂತರಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಯತ್ನಿಸುವ ಮೂಲಕ ದೇಶವಾಸಿಗಳು ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು.

ಕಾಲೇಜಿನಲ್ಲಿ ಇಂದು (ಜು.26) ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಹಾಗೂ ಎನ್.ಸಿ.ಸಿ. ಘಟಕಗಳ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ ದಿವಸ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀರಾಮಚಂದ್ರನ ಮಾತಿನಂತೆ ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತಲೂ ಮಿಗಿಲು. ಮಾತೃಭೂಮಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬಹುದು. ಆದರೆ ದೇಶದ ಗಡಿಯನ್ನು ಸೈನಿಕರು ರಕ್ಷಿಸುತ್ತಿದ್ದು, ಆಂತರಿಕ ರಕ್ಷಣೆಯನ್ನು ದೇಶವಾಸಿಗಳು ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಂದಿನ ವರ್ಷ ಕಾರ್ಗಿಲ್ ವಿಜಯ ದಿವಸಕ್ಕೆ ಇಪ್ಪತ್ತೈದು ವರ್ಷಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇಪ್ಪತ್ತೈದು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಪ್ರಸಕ್ತ ವರ್ಷದಿಂದ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕಾರ್ಗಿಲ್ ವಿಜಯ ದಿವಸ ಕುರಿತಂತೆ ಎನ್.ಸಿ.ಸಿ. ಘಟಕದ ವತಿಯಿಂದ ರಚಿಸಲಾದ ಭಿತ್ತಿಪತ್ರಿಕೆಯನ್ನು ಪ್ರಾಂಶುಪಾಲರು ಅನಾವರಣಗೊಳಿಸಿದರು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾಲೇಜಿನ ಕುಲಸಚಿವ (ಆಡಳಿತ) ಪ್ರೊ. ಶಶಿಶೇಖರ ಎನ್. ಕಾಕತ್ಕರ್, ಕಲಾ ನಿಕಾಯದ ಡೀನ್ ಡಾ. ಶಲೀಪ್ ಕುಮಾರಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ ಭಟ್, ಲೆಫ್ಟಿನೆಂಟ್ ಭಾನುಪ್ರಕಾಶ್ ಬಿ.ಇ. ಹಾಗೂ ಲೆಫ್ಟಿನೆಂಟ್ ಶುಭಾರಾಣಿ ಪಿ.ಎಸ್., ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ., ಎನ್.ಸಿ.ಸಿ. ಕೆಡೆಟ್ ಗಳು ಹಾಗೂ ಎನ್ನೆಸ್ಸೆಸ್ ಸ್ವಯಂಸೇವಕರು ಉಪಸ್ಥಿತರಿದ್ದರು.  

ವಿದ್ಯಾರ್ಥಿನಿ ಸಿಂಚನಾ ಕಾರ್ಯಕ್ರಮ ನಿರ್ವಹಿಸಿದರು.

Related posts

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya
error: Content is protected !!