27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು.

ಆರಂಭದಲ್ಲಿ ಮಕ್ಕಳಿಂದ ನೇಜಿ ನಾಟಿ ಮಾಡುವ ಕಾರ್ಯ ಜರಗಿತು. ಅನಂತರ ಕಬಡ್ಡಿ, ಓಟ, ಹಾಳೆಯಲ್ಲಿ ಮಕ್ಕಳನ್ನು ಕುಳ್ಳಿರಿಸಿ ಎಳೆಯುವ ಓಟ, ತ್ರೋಬಾಲ್, ರಿಲೆ ಮುಂತಾದ ಕ್ರೀಡಾ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು. ಈ ಮೂಲಕ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಸಾಯದ ಮತ್ತು ಕೆಸರಿನಲ್ಲಿ ಕ್ರೀಡಾ ಗಮ್ಮತ್ತಿನ ಸವಿಯನ್ನು ಸವಿದರು.

ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಅತಿಥಿಯಾಗಿ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ಜಗದೀಶ್, ಗಣೇಶ್ವರ್, ಸುಮನ್, ರವಿಚಂದ್ರ ಜೈನ್, ಸುಂದರ ಡಿ. ಕೋಕಿಲಾ, ರಾಜಶ್ರೀ, ಚಿತ್ರಾವತಿ ಮೊದಲಾದವರು ಹಾಜರಿದ್ದರು. ಸುಲೈಮಾನ್ ರವರು ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಪಾನೀಯದ ವ್ಯವಸ್ಥೆಯನ್ನು ಮಾಡಿದ್ದರು.

Related posts

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya
error: Content is protected !!