25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

ಕಾಶಿಪಟ್ಣ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಇಲ್ಲಿಯ ಗಣಿತ ಶಿಕ್ಷಕಿ ಶ್ರೀಮತಿ ಪದ್ಮಿನಿ ಸರಕಾರಿ ಪ್ರೌಢಶಾಲೆ ಅಳಿಯೂರಿಗೆ, ಮತ್ತು ಹಿಂದಿ ಶಿಕ್ಷಕಿ ಶ್ರೀಮತಿ ವಿಜಯಾಂಬಿಕ ಸರಕಾರಿ ಪ್ರೌಢಶಾಲೆ ಕುಂಬರಾಡಿ, ಸಕಲೇಶಪುರ ಇಲ್ಲಿಗೆ ವರ್ಗಾವಣೆ ಹೊಂದಿದ ಸಂದರ್ಭದಲ್ಲಿ ಇವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಿಲ್ಪ ವಹಿಸಿದ್ದರು. ಊರಿನ ಪರವಾಗಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸತೀಶ್ .ಕೆ ಅಭಿನಂದಿಸಿದರು.

ವಿದ್ಯಾರ್ಥಿಗಳಾದ ಅಂಕಿತಾ ಮತ್ತು ಶ್ರವಣ್ ಶಿಕ್ಷಕಿಯರ ಬಗ್ಗೆ ಮನದಾಳದ ಮಾತುಗಳನ್ನಾಡಿದರು. ಶ್ರೀಮತಿ ಸರೀನ್ ತಾಜ್ ವರ್ಗಾವಣೆ ಹೊಂದಿದ ಶಿಕ್ಷಕಿಯರನ್ನು ಸಭೆಗೆ ಪರಿಚಯಿಸಿದರು.

ಈ ಸಂದರ್ಭದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಇಲ್ಲಿಂದ ವರ್ಗಾವಣೆಗೊಂಡು ಬಂದ ಗಣಿತ ಶಿಕ್ಷಕ ಶಶಿಧರ್ ಇವರನ್ನು ಶಾಲೆಗೆ ಸ್ವಾಗತಿಸಲಾಯಿತು .

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಪದ್ಮಶ್ರೀ, ಪಂಚಾಯತ್ ಸದಸ್ಯೆ ಶ್ರೀಮತಿ ಶುಭ ವಿ. ಕೊಡುಗೈ ದಾನಿ ರಾಜು ಪೂಜಾರಿ, ನಿವೃತ್ತ ಅರಣ್ಯಾಧಿಕಾರಿ ಶ್ರೀಧರ್ ಪೂಜಾರಿ, ಸುಬ್ಬಣ್ಣ ಸಾಲಿಯಾನ್, ಅಖ್ತರ್ ಹಾಸ್ಕೋ, ಮಹಮದ್ ಶಾಫಿ, ಎಸ್.ಡಿ.ಎಂ.ಸಿ. ಸದಸ್ಯ ಯಶೋಧರ ನಲ್ಲರಬೆಟ್ಟು, ಗ್ರಾಮ ಪಂಚಾಯತ್ ಪಿಡಿಒ ಶ್ರೀಮತಿ ಆಶಾಲತಾ , ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ನಾಯ್ಕ, ಶಾಲಾ ಸ್ಥಾಪಕ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರವೀಣ್ ಪಿಂಟೊ, ಸ್ಥಳೀಯ ಮಸೀದಿ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶ್ರೀಮತಿ ಸೌಮ್ಯ ಸ್ವಾಗತಿಸಿ, ಶ್ರೀಮತಿ ಹರಿಣಾಕ್ಷಿ ವಂದಿಸಿದರು. ದೇವುದಾಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya
error: Content is protected !!