ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರಾವಕ ಬಂಧುಗಳ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಾ ಬರಲಾಗುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನವನ್ನು ನೀಡಲಾಗುತ್ತಿದೆ.
ಅಂತೆಯೇ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2023ರ ಸೆಪ್ಟೆಂಬರ್ 21ರಂದು ಶ್ರೀ ಕ್ಷೇತ್ರ ಹೊಂಬುಜದ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀ ಮದ್ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ಪ್ರಸ್ತುತ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಗಿಂತ ಮೇಲ್ಪಟ್ಟು ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಬಿಬಿಎಂ, ಇಂಜಿನಿಯರಿಂಗ್, ವೈದ್ಯಕೀಯ ಇನ್ನಿತರ ವ್ಯಾಸಂಗವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳು ಮಾತ್ರ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದ ಕಚೇರಿಯಲ್ಲಿ ಪಡೆದುಕೊಳ್ಳುವುದು. ಮತ್ತು ಅರ್ಜಿಯೊಂದಿಗೆ ಪ್ರಸ್ತುತ ಕಲಿಯುತ್ತಿರುವ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣ ಪತ್ರ, ಕಳೆದ ವರ್ಷ ಕಲಿತು ಉತ್ತೀರ್ಣರಾಗ ಬಗ್ಗೆ ಅಂಕಪಟ್ಟಿಯ ಯಥಾಪ್ರತಿ, ವಿದ್ಯಾರ್ಥಿಯ ಮನೆ ವಿಳಾಸ, ವಿದ್ಯಾರ್ಥಿಯ ಆಧಾರ್ ಪ್ರತಿ, ಸಂಪರ್ಕ ಸಂಖ್ಯೆ, ತಂದೆ ಮತ್ತು ತಾಯಿಯ ಹೆಸರು ನಮೂದಿಸಿ ಇವರಿಬ್ಬರಲ್ಲಿ ಒಬ್ಬರ ಸಹಿಯೊಂದಿಗೆ ಆಗಸ್ಟ್ 31ರ ಒಳಗೆ ಕೆ. ಜಯವರ್ಮರಾಜ ಬಳ್ಳಾಲ್, ಮ್ಯಾನೇಜಿಂಗ್ ಟ್ರಸ್ಟಿ, ಕೆಲ್ಲಗುತ್ತು ಸಬ್ರಬೈಲು ದಿ. ಕಿನ್ಯಮ್ಮ ಯಾನೆ ಗುಣಮತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ( ರಿ) , ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನ್ ಪೇಟೆ, ಬೆಳ್ತಂಗಡಿ- 524214, ದ.ಕ.
ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08256-233577 ಅಥವಾ 9448180439 ಸಂಖ್ಯೆಯ ದೂರವಾಣಿಯನ್ನು ಸಂಪರ್ಕಿಸಬಹುದೆಂದು ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ. ಜಯವರ್ಮರಾಜ ಬಳ್ಳಾಲ್ ರ ವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.