23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

ಧರ್ಮಸ್ಥಳ: ಶ್ರೀ ಕ್ಷೇ.ಧ.ಗ್ರಾ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಶ್ರೀ ಧ.ಮಂ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ ಇದರ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ, ಸಂತೃಪ್ತ ಜೀವನ ನಡೆಸುತ್ತಿರುವ ನವಜೀವನ ಸದಸ್ಯರ ಶತದಿನೋತ್ಸವ ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ ಜು.29 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಸಭಾಪತಿಗಳಾದ ಯು.ಟಿ ಖಾದರ್ ಕಾಯ೯ಕ್ರಮವನ್ನು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ವಹಿಸಿ, ಗುರುತಿನ ಚೀಟಿಯನ್ನು ವಿತರಿಸಿದರು. ವ್ಯಸನಮುಕ್ತ ಸಾಧಕರಿಗೆ ಸನ್ಮಾನವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿ ನೆರವೇರಿಸಿದರು. ಪುಸ್ತಕ ಬಿಡುಗಡೆ ಮಾಡಿದರು. ಯೋಜನೆ ಕಾರ್ಯನಿರ್ವಾಹಕ ಡಾ. ಎಲ್.ಹೆಚ್ ಮಂಜುನಾಥ್ ವಾರ್ಷಿಕ ವರದಿ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮನೋವೈದ್ಯ ಡಾ. ಶ್ರೀನಿವಾಸ್ ಭಟ್ ಎಂ. ಮಂಗಳೂರು, ಯೋಜನೆ ಮುಖ್ಯ ನಿರ್ವಹಣಾಧಿಕಾರಿ ಅನಿಲ್‌ಕುಮಾರ್ ಎಸ್.ಎಸ್, ಜನಜಾಗೃತಿ ವೇದಿಕೆಯ ಟ್ರಸ್ಟಿ ಎ. ರಾಮಸ್ವಾಮಿ, ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಟ್ರಸ್ಟಿ‌ ಸಂಪತ್ ಸಾಮ್ರಾಜ್ಯ , ದೇವದಾಸ ಹೆಬ್ಬಾರ್, ಸತೀಶ್ ಹೊನ್ನವಳ್ಳಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ 5 ಮಂದಿಗೆ ಜಾಗೃತಿ ಅಣ್ಣ ಮತ್ತು 4 ಮಂದಿಗೆ ಜಾಗೃತಿ ಮಿತ್ರ ಪ್ರಶಸ್ತಿಯನ್ನು ವಿತರಿಸಲಾಯಿತು.

ಪ್ರಾದೇಶಿಕ ನಿರ್ದೇಶಕ ವಿವೇಕ್ ಬಿ. ಪಾಯಿಸ್ ಸ್ವಾಗತಿಸಿದರು . ಜಗದೀಶ್ ಗುಬ್ಬಿ, ನವ್ಯ ಮೈಸೂರು, ತೋಪೇ ಗೌಡ‌ ತುರುವೆಕೆರೆ ಅನಿಸಿಕೆ ವ್ಯಕ್ತಪಡಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿ ಧನ್ಯವಾದವಿತ್ತರು. ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಕಾಯ೯ಕ್ರಮ ನಿರೂಪಿಸಿದರು.

Related posts

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya
error: Content is protected !!