24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

ನಾವೂರು : ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಸ.ಹಿ.ಪ್ರಾ.ಶಾಲೆ ನಾವೂರು ಇಲ್ಲಿ ಇತ್ತೀಚೆಗೆ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆಗೊಂಡಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಸುರೇಶ್ ರವರು ವಹಿಸಿದ್ದರು. ರೋಟರಿ ಕ್ಲಬ್‍ನ ಅಧ್ಯಕ್ಷ ಅನಂತ್‍ಭಟ್ ಮಚ್ಚಿಮಲೆ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಆ್ಯಂಟನಿ ರವರು, ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಶಾಲೆಯನ್ನು ಗುರುತಿಸಿ ಮಕ್ಕಳಿಗೆ ನೈತಿಕ ಶಿಕ್ಷಣ, ಮಂಕುತಿಮ್ಮನ ಕಗ್ಗ ಮತ್ತು ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಪ್ರಸ್ತಾವಿಕ ಮಾತುಗಳನ್ನಾಡಿದರು.

ನಾವೂರು ಆರೋಗ್ಯ ಕ್ಲಿನಿಕ್‍ನ ಡಾ| ಪ್ರದೀಪ್‍ರವರು ಮಾತನಾಡಿ ಮಕ್ಕಳ ವ್ಯಕ್ತಿತ್ವ ವಿಕಸನ, ಹಾಗೂ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಕ್ಕಳಲ್ಲಿ ಬದಲಾವಣೆ ತರಲು ಇದು ಒಂದು ಉತ್ತಮ ಕಾರ್ಯಕ್ರಮ ಎಂದರು.

ಕಾರ್ಯಕ್ರಮದಲ್ಲಿ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ, ರೋಟರಿ ಕ್ಲಬ್‍ನ ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಡಿ.ಎಂಗೌಡ (ಮಾಜಿ ಸೈನಿಕರು) , ನಾವೂರು ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕರಾದ ಅಶೋಕ್ ಎಸ್.ವಿ, ಎಸ್‍ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು, ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ರೋಹಿಣಿ ಕೆ.ರವರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಶುಭಾ ಎಂ ರವರು ಧನ್ಯವಾದವಿತ್ತರು. ದೈ.ಶಿ ಶಿಕ್ಷಕರಾದ ಪಂಚಾಕ್ಷರಪ್ಪರವರು ಕಾರ್ಯಕ್ರಮ ನಿರೂಪಿಸಿದರು.

Related posts

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!