September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!