September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

ಬೆಳ್ತಂಗಡಿ: ಇತೀಚೆಗೆ ಎ.ಜೆ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿ ವೈದ್ಯರ ನಿರ್ಲಕ್ಷ್ಯದ ಆರೋಪಕ್ಕೆ ಜೀವವನ್ನೇ ಕಳೆದುಕೊಂಡ ವೇಣೂರಿನ ಶಿಲ್ಪಾ ಆಚಾರ್ಯ ಮನೆಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನವನ್ನು ವ್ಯಕ್ತಪಡಿಸಿದೆ.

ಶಿಲ್ಪಾ ಆಚಾರ್ಯಳ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ಎಡವಟ್ಟಾಗಿ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿ ಪ್ರಾಣವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ಕಾರಣರಾದ ವೈದ್ಯರ ಹಾಗೂ ಎಜೆ ಆಸ್ಪತ್ರೆಯ ವಿರುದ್ಧ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮಕೈಗೊಳ್ಳಲು ಹಾಗೂ ಸಾವಿಗೆ ನ್ಯಾಯಯುತ ಪರಿಹಾರವನ್ನು ಒದಗಿಸಿಕೊಡುವವರೆಗೂ ಕುಟುಂಬ ನಡೆಸುವ ಹೋರಾಟದ ಜೊತೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ ಹಾಗೂ ಹೋರಾಟವನ್ನು ಇನ್ನಷ್ಟು ತೀವೃಗೊಳಿಸಲು ಎಲ್ಲಾ ಸಹಕಾರವನ್ನು ನೀಡಲಿದೆ ಎಂದು ನಿಯೋಗದಲ್ಲಿ ಇದ್ದವರು ‌ಹೇಳಿದರು.

ನಿಯೋಗದಲ್ಲಿ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲ ಮನೋಜ್ ವಾಮಂಜೂರು, ಶ್ರೀನಾಥ್ ಕಾಟಿಪಳ್ಳ, ಮಿಥುನ್ ಕುತ್ತಾರ್, ಸಿಪಿಐಎಂ ಗುರುಪುರ ವಲಯ ಸಮಿತಿ ಕಾರ್ಯದರ್ಶಿ ಸದಾಶಿವದಾಸ್ , ಸಿಪಿಐಎಂ ಜಿಲ್ಲಾ ಮುಖಂಡರಾದ ವಸಂತಿ ಕುಪ್ಪೆಪದವು, ಕುಸುಮ ಆಚಾರಿ, ನೋಣಯ್ಯ ಗೌಡ, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ ಮುಂತಾದವರು ಉಪಸ್ಥಿತರಿದ್ದರು.

Related posts

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya
error: Content is protected !!