30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ ಗಣೇಶ್ ಕಲಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವು ಜು.30 ರಂದು ಜರುಗಿತು.

ಕಾರ್ಯಕ್ರಮವನ್ನು ಡಾ. ಮೋಹನ್ ದಾಸ್ ಗೌಡ ಕೊಕ್ಕಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು.

ವೇದಿಕೆಯಲ್ಲಿ ಡಾ. ಎಂ. ಎಂ. ದಯಾಕರ್ ಉಜಿರೆ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಗ್ರಾ. ಪಂ.ಅಧ್ಯಕ್ಷ ಯೋಗೀಶ್ ಅಲಂಬಿಲ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಸ್ವಾಗತಿಸಿದರು. ಕೇಶವ ಗೌಡ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿ, ಸಮಿತಿ ಸದಸ್ಯ ಪುರಂದರ ಗೌಡ ಕಡಿರ ಧನ್ಯವಾದವಿತ್ತರು.

Related posts

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!