29.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.
ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ‌ಬಾವಿಗೆ ಬಿದ್ದರೊ, ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya
error: Content is protected !!