ಬೆಳ್ತಂಗಡಿ: ಎಲ್ಲಾ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಶಿಕ್ಷಣ ಅತಿ ಮುಖ್ಯವಾಗಿದೆ. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ವೃತ್ತಿಗೆ ಪೂರಕ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಇದು ನಿಮ್ಮ ಮುಂದಿನ ಉದ್ಯೋಗಕ್ಕೆ ದಾರಿದೀಪವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ್ ಕೆ. ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭ ಕಛೇರಿ ಪ್ರಬಂಧಕ ಅಣ್ಣು ಗೌಡ ಮಾತನಾಡಿ ತಂತ್ರಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಮಾಡುವುದು ಇಂದಿನ ಪ್ರಪಂಚದ ಬೆಳವಣಿಗೆಯ ತೀವ್ರತೆಗೆ ಬಹಳ ಮುಖ್ಯ. ನಮ್ಮ ಜೀವನಕ್ಕೆ ಆಹಾರ ಹೇಗೆ ಮುಖ್ಯವೋ, ಹಾಗೇ ಶಿಕ್ಷಣವೂ ಅಷ್ಟೇ ಪ್ರಮುಖವಾದುದು ಎಂದರು. ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು.
ಒಟ್ಟು 24 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡಕೊಂಡಿರುತ್ತಾರೆ. ಇದರಲ್ಲಿ 8 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ ಹಾಗೂ ಉಳಿದ 16 ಮಂದಿ ‘ಎ’ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.