ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಪಿ ತ್ಯಾಂಪಣ್ಣ ಶೆಟ್ಟಿಗಾರವರು ಜು.31 ರಂದು ವಯೋ ನಿವೃತ್ತಿ ಹೊಂದಲಿದ್ದು ಇವರಿಗೆ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಇವರ ಸಾರ್ಥಕ ಸೇವೆಯ ಸವಿನೆನಪಿಗೆ ಆಡಳಿತ ಮಂಡಳಿ, ಸಿಬ್ಬಂದಿವರ್ಗ ಮತ್ತು ಸರ್ವಸದಸ್ಯರ ಪರವಾಗಿ ಬೀಳ್ಕೊಡುಗೆ ಅಂಗವಾಗಿ ಗೌರವಾರ್ಪಣೆ ಕಾರ್ಯಕ್ರಮವು ಜು.30ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ನಡೆಯಿತು.
ಶಾಸಕ ಹರೀಶ್ ಪೂಂಜರವರು ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರನ್ನು ಸನ್ಮಾನಿಸಿ, ಗೌರವಿಸಿದರು.
ವೇದಿಕೆಯಲ್ಲಿ ನಿವೃತ್ತ ಯೋಧ ಮಹಾಬಲ ಕೆ ಉಪಸ್ಥಿತರಿದ್ದು, ವಿವಿಧ ಸಹಕಾರಿ ಸಂಘಗಳಿಂದ, ಆಡಳಿತ ಮಂಡಳಿ ಸಿಬ್ಬಂದಿವರ್ಗ ಆತ್ಮೀಯರು ತ್ಯಾಂಪಣ್ಣ ಶೆಟ್ಟಿಗಾರ್ ರವರನ್ನು ಅಭಿನಂದಿಸಿದರು.
ಅಧ್ಯಕ್ಷ ರಾಘವೇಂದ್ರ ನಾಯಕ್ ತ್ಯಾಂಪಣ್ಣ ಶೆಟ್ಟಿಗಾರ್ ಬಗ್ಗೆ ಮಾತನಾಡಿದರು. ಹಾಗೂ ಆತ್ಮೀಯರು ತ್ಯಾಂಪಣ್ಣ ಶೆಟ್ಟಿಗಾರ್ ರವರ ಕಾರ್ಯ ವೈಖರಿಯ ಬಗ್ಗೆ ಮಾತನಾಡಿದರು. ತ್ಯಾಂಪಣ್ಣ ಶೆಟ್ಟಿಗಾರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಈ ವೇಳೆ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಲಾಯಿತು. ಶಾಸಕ ಹರೀಶ್ ಪೂಂಜ ತ್ಯಾಂಪಣ್ಣ ಶೆಟ್ಟಿಗಾರ್ ರವರ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜು ಕೆ, ನಿರ್ದೇಶಕರುಗಳಾದ ಕೊರಗಪ್ಪ ಗೌಡ, ಧರ್ಮರಾಜ್ ಎ, ತಾರಾ ಟಿ, ಚಿಪ್ಲೂಣ್ ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್ ಜಿ, ಕುಶಾಲಪ್ಪ ಗೌಡ, ಬೇಬಿ ಕಿರಣ್,ಮುರಳಿಧರ ಶೆಟ್ಟಿಗಾರ್ ಅಡ್ಕಡಿ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ಧೀನ್, ಸಿಬ್ಬಂದಿ ವರ್ಗ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಧರ್ಮರಾಜ್ ಗೌಡ ಅಡ್ಕಡಿ ಸ್ವಾಗತಿಸಿದರು. ನಿರ್ದೇಶಕ ರತೀಶ್ ಬೇಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ ರವಿಚಂದ್ರ ರಾವ್ ಸನ್ಮಾನ ಪತ್ರ ವಾಚಿಸಿದರು. ಪ್ರವೀಣ್ ಕುಲಾಲ್ ಉಪ್ಪರಡ್ಕ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಕುಶಾಲಪ್ಪ ಗೌಡ ಧನ್ಯವಾದವಿತ್ತರು.