September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದೆ , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ ನೀಡಿದೆ.

ಶತಮಾನಗಳಿಂದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಜೀವನ ಕಟ್ಟಿಕೊಂಡಿರುವ ಸಾವಿರಾರು ಕುಟುಂಬಗಳನ್ನು ಬೀದಿಪಾಲು ಮಾಡುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಮುಂದಾದರೆ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ರಕ್ತಪಾತವಾದರೂ ಸರಿ , ಯೋಜನೆಯ ವಿರುದ್ಧ ಮಾಡು ಇಲ್ಲವೇ ಮಡಿ ಎನ್ನುವ ಹೋರಾಟವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಕಾಡುಮೃಗಗಳ ಜೊತೆಗೆ ಸೆಣಸಾಡಿ ಜೀವನ ಕಟ್ಟಿಕೊಂಡಿರುವ ನಮಗೆ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಗೊತ್ತಿದೆ ಎಂದು ಸಂಘಟನೆಯ ಜಿಲ್ಲಾ , ತಾಲೂಕು ಅಧ್ಯಕ್ಷ ವಸಂತ ನಡ , ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್ 1 ರಂದು ದ.ಕ ಜಿಲ್ಲೆಗೆ ಭೇಟಿ ನೀಡುವ ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕು , ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ ಯಾವುದೇ ಸಚಿವರು ಜಿಲ್ಲೆಗೆ ಭೇಟಿ ನೀಡಿದರೂ ಕಪ್ಪು ಬಾವುಟ ಪ್ರದರ್ಶಿಸಬೇಕಾಗುತ್ತದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಬಲವಾಗಿ ವಿರೋಧಿಸಿದ ಕಸ್ತೂರಿ ರಂಗನ್ ವರದಿಯನ್ನು ಇದೀಗ ಏಕಾಏಕಿ ಜಾರಿಗೆ ಮುಂದಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿಗಳ ಆಧಾರದಲ್ಲಿ ಅಧಿಕಾರ ವಹಿಸಿಕೊಂಡು ಇದೀಗ ಮತ್ತೊಂದೆಡೆ ಜನರ ಜೀವನದ ಜೊತೆಗೆ ಚೆಲ್ಲಾಟವಾಡಿದರೆ ನಿಮ್ಮನ್ನು ಜನರು ಮೆಚ್ಚಲಾರರು ಎಂಬ ಸಾಮಾನ್ಯ ಜ್ಞಾನ ಅರಣ್ಯ ಸಚಿವರಿಗೆ ಇಲ್ಲವೇ ? ಸ್ವಾತಂತ್ರ್ಯ ಲಭಿಸಿ 76 ವರ್ಷಗಳಾದರೂ ಇಂದಿಗೂ ಮೂಲಭೂತ ಸೌಕರ್ಯಗಳಾದ ರಸ್ತೆ , ವಿದ್ಯುತ್ ವಂಚಿತರಾದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಶತಮಾನಗಳಿಂದ ವಾಸಿಸುವ ಜನರಿಗೆ ಬದುಕುವ ಹಕ್ಕುಗಳನ್ನು ಖಾತ್ರಿಪಡಿಸಬೇಕಾದ ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತಂದರೆ ಮುಂದಾಗುವ ಅಹಿತಕರ ಘಟನೆಗಳಿಗೆ ನಾವು ಹೊಣೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Related posts

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya
error: Content is protected !!