29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

ಇಂದಬೆಟ್ಟು: ತಾಲೂಕಿನ ಹೆಸರಾಂತ ಯುವ ಸಂಘಟನೆ ಕಳೆದ 10 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಕ್ರೀಡಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ನವಭಾರತ್ ಗೆಳೆಯರ ಬಳಗದ ವತಿಯಿಂದ ಜು. 30 ರಂದು ಇಂದಬೆಟ್ಟು ಕಲ್ಲಾಜೆ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮವು ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆನಂದ ಕೊಪ್ಪದಕೋಡಿ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನವಭಾರತ್ ಗೆಳೆಯರ ಬಳಗವು ಸರ್ಕಾರಿ ಹಿರಿಯ ಪ್ರಾಥಮಿಕ ಕಲ್ಲಾಜೆ ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಯೋಜನೆ ನವಭಾರತ್ ವಿದ್ಯಾನಿಧಿಯನ್ನು ಸಂಘದ ಪದಾಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಅಧ್ಯಕರಿಗೆ ಹಾಗೂ ಶಿಕ್ಷಕರಿಗೆ ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲಾ ಶಿಕ್ಷಕಿ ಶ್ರೀಮತಿ ದೀಪಾ ಕಿರಣ್ ಮಾತಾಡಿ ವಿದ್ಯಾನಿಧಿ ಯೋಜನೆಗೆ ಧನ್ಯವಾದ ತಿಳಿಸಿದರು. ಅಧ್ಯಕ್ಷತೆಯನ್ನು ನವಭಾರತ್ ಗೆಳೆಯರ ಬಳಗದ ಅಧ್ಯಕ್ಷರಾದ ಅಶ್ವತ್ಥ್ ರಾಜ್ ಕಲ್ಲಾಜೆ ವಹಿಸಿದ್ದರು, ಗೌರವ ಅಧ್ಯಕ್ಷರಾದ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಕಾರ್ಯದರ್ಶಿ ಸುಕೇಶ್ ನಡುಮನೆ, ಕೋಶಾಧಿಕಾರಿ ಯತೀಶ್ ನೆರೋಲ್ದ ಪಲ್ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ನಡೆದ ವಿವಿಧ ಕ್ರೀಡೆಗಳಲ್ಲಿ ಸಂಘದ ಸದಸ್ಯರು, ಊರವರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಮಧ್ಯಾಹ್ನ ಸವಿ ರುಚಿಯಾದ ಭೋಜನ ಏರ್ಪಡಿಸಲಾಗಿತ್ತು.

Related posts

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!