September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

ಬೆಳ್ತಂಗಡಿ: ನಾಲ್ಕು ವರ್ಷಗಳಿಗೊಮ್ಮೆ ಜಾಗತಿಕ ಮಟ್ಟದಲ್ಲಿ ನಡೆಯುವ ವಿಶ್ವ ಜಾಂಬೂರಿ ಈ ಬಾರಿ ಕೊರಿಯಾ ದೇಶದಲ್ಲಿ ನಡೆಯಲಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಕುಲಾ ಎಂ. ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ವಂಶಿ ಪಾಲ್ಗೊಳ್ಳಲಿದ್ದಾರೆ .


ದೇಶ ಸಂಸ್ಕೃತಿಯನ್ನು ಬಿಂಬಿಸುವ, ಕ್ರಿಯಾಶೀಲತೆ, ನಾಯಕತ್ವ,ಕೌಶಲ್ಯ ಮತ್ತು ವೈಯಕ್ತಿಕ ಹೊಣೆಗಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕನಸುಗಳನ್ನು ಹಂಚಿಕೊಳ್ಳಿ ಎನ್ನುವ ಧ್ಯೇಯದೊಂದಿಗೆ ಆಗಸ್ಟ್ 1ರಿಂದ 12 ರವರೆಗೆ ಈ ಬಾರಿಯ ವಿಶ್ವ ಜಾಂಬೂರಿ ಸಂಪನ್ನ ಗೊಳ್ಳಲಿದೆ.


ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಬೃಹತ್ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದ ವಿದ್ಯಾರ್ಥಿಗಳನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮತ್ತು ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
error: Content is protected !!