29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

ಬೆಳ್ತಂಗಡಿ: ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ನ ಸಂಯೋಜಿತ ವೆಹಿಕಲ್ ಯೂನಿಯನ್ ಗಳು ಸಾರಿಗೆ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಆಗ್ರಹಿಸಲಾಗಿತ್ತು. ರಾಜ್ಯದಾದ್ಯಂತ ಚಾಲಕ ಸಂಘಟನೆಗಳು‌ ಕೂಡ ಚಾಲಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವಂತೆ ಅಗ್ರಹಿಸಿದ್ದವು.

ಈ ಪ್ರಯುಕ್ತ ಸಾರಿಗೆ ಆಯುಕ್ತರು ಬೆಂಗಳೂರು ಕಚೇರಿಯಲ್ಲಿ ಸಾರಿಗೆ ಒಕ್ಕೂಟದ ಸಂಘಟನೆಗಳ ಸಭೆಯನ್ನು ಕರೆದಿದ್ದು ಬೆಳ್ತಂಗಡಿ ತಾಲೂಕಿನ ರಿಕ್ಷಾ ಚಾಲಕ ಸಂಘದ ಪ್ರತಿನಿಧಿಗಳು ಈ ಸಭೆಯಲ್ಲಿ‌ ಭಾಗವಹಿಸಿದರು.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಹಾಗೂ ಸಾರಿಗೆ ಅಯುಕ್ತರು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ವೆಹಿಕಲ್ ಯೂನಿಯನ್ ಪ್ರಮುಖರು .ಮುಖ್ಯವಾಗಿ ರಿಕ್ಷಾ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗೆ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ಹಾಗೂ ಉಚಿತ ಆಸ್ಪತ್ರೆ ಚಿಕಿತ್ಸಾ ವೆಚ್ಚ, ಚಾಲಕರ ಮಕ್ಕಳಿಗೆ ಸ್ಕಾಲರ್ ಶಿಪ್ ,ಗೃಹ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವಂತೆ, ವ್ರದ್ದಾಪ್ಯ ಪಿಂಚಣಿಯನ್ನು ನೀಡುವಂತೆ ಸಭೆಯಲ್ಲಿ ಅಗ್ರಹಿಸಲಾಯಿತು.

ಬೆಳ್ತಂಗಡಿ ತಾಲೂಕು ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಕೃಷ್ಣಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗರ್ಡಾಡಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!