24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಂಜುನಾಥ ದಳದ ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ ಯನ್ನು ವಿಭಿನ್ನವಾಗಿ ಆಚರಿಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ಪ್ರತಿಜ್ಞೆಯನ್ನು ಸ್ವೀಕರಿಸಿದರು.


ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿಯಾದ ಬಿ. ಕುಸುಮಾಧರ್, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಯಾದ ನಟರಾಜ್, ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ವೃತ್ತ ನಿರೀಕ್ಷಕರಾದ ಧನ್ ರಾಜ್ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿಯಾದ ಹರೀಶ್ ಇವರುಗಳಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ನ ಮಹತ್ವವನ್ನು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
error: Content is protected !!