ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ತನ್ನ ಅನನ್ಯ ದಾಖಲೆಗಳ ಮೂಲಕ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಗ ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳುವ ಸಾಧನೆ ಮಾಡಿದ್ದಾರೆ.
ಅತ್ಯುತ್ತಮ ಪಿಯು ಫಲಿತಾಂಶ ಮತ್ತು ನೀಟ್ ನಲ್ಲಿ 692 ಅಂಕಗಳನ್ನು ಪಡೆದಿದ್ದ ಆದಿತ್ ಜೈನ್ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾದ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಆಯ್ಕೆಯಾಗಿದ್ದಾರೆ. ವರ್ಷ ವೊಂದಕ್ಕೆ ಎಂ.ಬಿ.ಬಿ.ಎಸ್ ಗೆ ಕೇವಲ ನೂರು ಸೀಟುಗಳಿರುವ ಈ ವಿಶ್ವ ವಿದ್ಯಾಲಯದಲ್ಲಿ ಆದಿತ್ ಆಯ್ಕೆಯಾಗಿರುವುದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುವಂತಹ ಇನ್ನೋರ್ವ ಸಾಧಕಿ ಸಂಜನಾ ಈರನೈವರ್. ವರ್ಷವೊಂದಕ್ಕೆ ನೂರ ಇಪ್ಪತ್ತೈದು ಸೀಟುಗಳಿರುವ ಅತ್ಯಂತ ಪ್ರತಿಷ್ಠಿತ ಎ ಐ ಐ ಎಂ ಎಸ್ (AIIMS) ಭೋಪಾಲ್ ನಲ್ಲಿ ವ್ಯಾಸಂಗಕ್ಕೆ ಆಯ್ಕೆಯಾಗಿದ್ದಾರೆ.
ಎಕ್ಸೆಲ್ ನಲ್ಲಿ ಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ಈ ಬಾರಿಯೂ ರಾಷ್ಟ್ರ – ಅಂತಾರಾಷ್ಟ್ರೀಯ ಮಟ್ಟದ ವಿವಿಧ ಮೆಡಿಕಲ್ ಕಾಲೇಜು ಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾಗಿರುವುದು ಉಲ್ಲೇಖನೀಯ.ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.