32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

ಬೆಳ್ತಂಗಡಿ: ಕುರಿಯ ವಿಟ್ಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಆ.7 ರಿಂದ ಆ.13ರವರೆಗೆ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮ ಲಾಯ್ಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಲಿದೆ.


ಪ್ರತಿದಿನ ಸಂಜೆ 6ರಿಂದ 9 ಗಂಟೆವರೆಗೆ ವಿದ್ವಾನ್ ಉಮಾಕಾಂತ ಭಟ್ಟ ಕೇರೆಕೈ ಅವರ ಪ್ರಧಾನಭೂಮಿಕೆಯ ಅರ್ಥ ಪ್ರಸ್ತುತಿಯೊಂದಿಗೆ ಯಕ್ಷಾವತರಣ 4 ನಡೆಯಲಿದ್ದು ರಾಮ, ವಸಿಷ್ಠ, ಕರ್ಣ, ಕೃಷ್ಣ, ವಿದುರ, ಅತಿಕಾಯ, ಕೃಷ್ಣ ಕೇಂದ್ರಿತ ಪ್ರಸಂಗಗಳು ನಡೆಯಲಿವೆ. ತೆಂಕು ಬಡಗಿನ ಪ್ರಸಿದ್ಧ ಕಲಾವಿದರು ಹಿಮ್ಮೇಳ ಮುಮ್ಮೇಳದಲ್ಲಿ ಭಾಗವಹಿಸಲಿದ್ದಾರೆ.

ಕೊರೊನಾ ಸಂದರ್ಭದಲ್ಲಿ ರೋಟರಿ ಕ್ಲಬ್, ಸ್ಥಾನಿಕ ಬ್ರಾಹ್ಮಣ ಸಭಾ, ಕುರಿಯ ಪ್ರತಿಷ್ಠಾನ ಜತೆಗೂಡಿ ಯಕ್ಷಾವತರಣ ತಾಳಮದ್ದಳೆ ಸಪ್ತಕ ಆರಂಭಿಸಿದ್ದು ಈಗ 4ನೇ ವರ್ಷಕ್ಕೆ ಕಾಲಿರಿಸಿದೆ. ವಿಟ್ಠಲ ಶಾಸ್ತ್ರಿ ಪ್ರತಿಷ್ಠಾನ ರಜತ ವರ್ಷ ಅಂಗವಾಗಿ ನಡೆಸುತ್ತಿರುವ ಸರಣಿ ತಾಳಮದ್ದಳೆಗಳ ಪೈಕಿ 104 ತಾಳಮದ್ದಳೆಗಳು ಈಗಾಗಲೇ ರಾಜ್ಯ ಹಾಗೂ ಹೊರರಾಜ್ಯದ ವಿವಿಧೆಡೆ ನಡೆದಿದ್ದು ಇದು ಸರಣಿಯ ಮುಂದುವರಿದ ಭಾಗವಾಗಿದೆ ಎಂದು ಕುರಿಯ ಪ್ರತಿಷ್ಠಾನದ ಸಂಚಾಲಕ ಅಶೋಕ ಭಟ್ ಎನ್.ಉಜಿರೆ, ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಅಧ್ಯಕ್ಷ ಶಿವಾನಂದ ರಾವ್ ಕಕ್ಕಿನೇಜಿ, ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
error: Content is protected !!