24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

ಬೆಳ್ತಂಗಡಿ: ರಾಜ್ಯ ಸರಕಾರ ಒಟ್ಟು 211 ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ಅವರನ್ನು ನೇಮಕ ಮಾಡಿದೆ.

ನಾಗೇಶ್ ಕದ್ರಿ ಅವರು ಈ ಹಿಂದೆ ಕೊಡಗು ಜಿಲ್ಲೆಯ ಡಿ.ಸಿ. ಆರ್.ಬಿ. ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಕರ್ತವ್ಯದಲ್ಲಿದ್ದ ಜಾಗಕ್ಕೆ ವರ್ಗಾವಣೆಗೊಂಡಿದ್ದಾರೆ.

ಈ ಹಿಂದೆ 2016 ರಿಂದ 2018ರ ವರೆಗೆ ಬೆಳ್ತಂಗಡಿಯಲ್ಲಿ, 2018 ರಿಂದ 2020ರ ವರೆಗೆ ಉಪ್ಪಿನಂಗಡಿಯ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸಿ, ನಂತರ ಮಂಗಳೂರಿನ ಐ.ಜಿ. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಇವರು ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಯಾವುದೇ ಠಾಣೆ ನೀಡದೆ ಬಾಕಿ ಉಳಿಸಿದೆ.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!