37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳದ ನಿವಾಸಿ ಸೌಜನ್ಯ ಎಂಬ ಹೆಣ್ಣುಮಗಳನ್ನು ಅಮಾನವೀಯವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಕಪ್ಪು ಚುಕ್ಕೆಯಾಗಿದೆ. ಈ ಪುಕರಣವನ್ನು ಅಃI ತನಿಖೆ ನಡೆಸಿದ ನಂತರವೂ ಸೌಜನ್ಯ ಕೊಲೆಗೆ ನ್ಯಾಯ ಸಿಗಲಿಲ್ಲ. ಹಾಗಾಗಿ ಈ ಪ್ರಕರಣವನ್ನು ಉಚ್ಚ ನ್ಯಾಯಾಲಯ ಅಥವಾ ಸರ್ವೋಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ಮುಖಾಂತರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನ ಬಂಧನ ಮಾಡಿ, ಸೌಜನ್ಯ ಕೊಲೆ ರಹಸ್ಯವನ್ನು ಬೇಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ವಿಶ್ವ ಹಿಂದೂ ಪರಿಷತ್ ದ.ಕ ಜಿಲ್ಲೆ ಆಗ್ರಹಿಸುತ್ತದೆ ಎಂದು ವಿ.ಹಿಂ.ಪ ಪ್ರಾಂತ ಸಂಚಾಲಕ ಡಾ. ಎಂ.ಬಿ ಪುರಾಣಿಕ್ ಹೇಳಿದರು.

ಅವರು ಆ.2ರಂದು ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೌಜನ್ಯಳ ನ್ಯಾಯಕೋಸ್ಕರ ಪ್ರಾಮಾಣಿಕವಾಗಿ, ನ್ಯಾಯ ಸಮ್ಮತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ ಪರಿಷದ್ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.
ದೇವಸ್ಥಾನ, ದೈವಸ್ಥಾನ ಮತ್ತು ಮಠ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ:
ದಕ್ಷಿಣ ಕನ್ನಡ ಜಿಲ್ಲೆ ದೈವ ದೇವರ ಮೇಲೆ ಅಪಾರ ನಂಬಿಕೆ ಇರುವ ಜಾಗ, ಈ ತುಳುನಾಡಿನಲ್ಲಿ ಅನ್ಯಾಯವಾದಾಗ ದೈವ ದೇವರು ಎಂದಿಗೂ ನಮ್ಮ ಕೈಬಿಡುವುದಿಲ್ಲ, ಯಾವುದೇ ಅನ್ಯಾಯವಾದಾಗ ದೈವ ದೇವರ ಮೊರೆ ಹೋಗುವುದು ನಮ್ಮ ಹಿರಿಯರಿಂದ ಬಂದ ವಾಡಿಕೆ ಹಾಗಾಗಿ ಇಂತಹ ಪುಣ್ಯ ನಾಗಾರಾಧನೆ, ದೈವಾರಾಧನೆ ನಾಡಿನಲ್ಲಿ ಈ ಅನ್ಯಾಯದ ವಿರುದ್ಧ ಮುಗ್ಧ ಹೆಣ್ಣು ಮಗಳು ಸೌಜನ್ಯ ಕೊಲೆ ಪುಕರಣ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನ ಹಾಗು ಮಠ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಕರೆ ನೀಡುತ್ತದೆ ಎಂದು ಹೇಳಿದರು.


ಧರ್ಮಸ್ಥಳ ಕ್ಷೇತ್ರದ ಅವಹೇಳನ ಸಹಿಸುವುದಿಲ್ಲ :
ಧರ್ಮ ನೆಲೆಸಿರುವ ಸ್ಥಳವೇ ಧರ್ಮಸ್ಥಳವೆಂಬುದು ಭಕ್ತರ ನಂಬಿಕೆ.. ಇಲ್ಲಿ ಸಾಕ್ಷಾತ್ ಪರಮೇಶ್ವರನ ನೆಲಸಿದ್ದಾನೆ ಎಂದು ಹೇಳುತ್ತಾರೆ. ಧರ್ಮಸ್ಥಳ ಎಂದರೆ ಧರ್ಮವು ನೆಲಸಿರುವ ಸ್ಥಳ ಎಂಬುದು ಭಕ್ತದ ನಂಬಿಕೆ ಹಾಗಾಗಿ ಲಕ್ಷಾಂತರ ಭಕ್ತರು ಈ ಇತಿಹಾಸ ಪ್ರಸಿದ್ದ ದೇವಸ್ಥಾನಕ್ಕೆ ಬಂದು ಮಂಜುನಾಥ ಸ್ವಾಮಿಯ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಪಡೆಯುತ್ತಾರೆ. ಪ್ರತಿನಿತ್ಯ ಸಾವಿರಾರು ಭಕ್ತರಿಗೆ ಅನ್ನ ಹಾಸೋಹ ನಿರಂತರವಾಗಿ ನಡೆಯುತ್ತಾ ಬಂದಿದ. ಶ್ರೀಕ್ಷೇತ್ರದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಗಳು ರಾಜ್ಯದ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿದೆ.
ಇಂತಹ ಇತಿಹಾಸ ಪ್ರಸಿದ್ಧ ಕ್ಷೇತ್ರವನ್ನು ಸೌಜನ್ಯ ಕೊಲೆ ಪ್ರಕರಣ ಹೋರಾಟದ ಹೆಸರಿನಲ್ಲಿ ಅವಹೇಳನ ಮಾಡುವುದು, ಅಗೌರವ ತೋರುವುದು, ಶ್ರೀಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ವಿರೋಧಿಸುತ್ತದೆ. ಮತ್ತು ಶ್ರೀಕ್ಷೇತ್ರಕ್ಕೆ ಅವಮಾನ ಮಾಡಿದಲ್ಲಿ ಇಂದಿಗೂ ಸಹಿಸುವುದಿಲ್ಲ. ಸೌಜನ್ಯ ಕೊಲೆ ಪುಕರಣ ಹೋರಾಟವನ್ನು ಮುಂದಿಟ್ಟುಕೊಂಡು ಕೆಲವು ಪುಗತಿಪರ ಬುದ್ಧಿಜೀವಿಗಳ ಸಂಘಟನೆಗಳು ಕ್ಷೇತ್ರದ ಬಗ್ಗೆ ಅಪಪುಚಾರ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಈ ರೀತಿಯ ಅಪಪಚಾರ, ಅವಮಾನ ಮಾಡಿದಲ್ಲಿ ಅಂತಹ ಸಂಘಟನೆಗಳಿಗೆ ವಿಶ್ವ ಹಿಂದೂ ಪರಿಷದ್ ನೇರ ಹೋರಾಟದ ಎಚ್ಚರಿಕೆಯನ್ನು ನೀಡುತ್ತದೆ ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್, ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಪ್ರಾಂತ ಸಹ ಸೇವಾ ಪ್ರಮುಖ್ ಗೋಪಾಲ್ ಕುತ್ತಾರ್, ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪುತ್ತೂರು ನವೀನ್ ನೆರಿಯ, ಜಿಲ್ಲಾಧ್ಯಕ್ಷ ಎಚ್. ಪುರುಷೋತ್ತಮ, ದಿನೇಶ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
error: Content is protected !!