25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಧರ್ಮಸ್ಥಳ: ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಆ.2 ರಂದು ನಡೆಯಿತು.

ಪಂದ್ಯಾಟವನ್ನು ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಎಸ್ ವಿರೂಪಾಕ್ಷಪ್ಪ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು, ಶ್ರೀ ಧ ಮಂ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಎಚ್,
ಶ್ರೀಮತಿ ಸುಜಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಕೃಷ್ಣಾನಂದ ರಾವ್ ಮತ್ತು ಶ್ರೀಮತಿ ರಮಾ ರಾಜೇಶ್ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ತಾಲೂಕಿನ ಒಟ್ಟು 10 ತಂಡಗಳು ಭಾಗವಹಿಸಿದ್ದು, ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಪ್ರಥಮ ಸ್ಥಾನ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ದ್ವಿತೀಯ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಪ್ರಥಮ ಸ್ಥಾನ, ಶ್ರೀ ಧ ಮಂ ಅನುದಾನಿತ ಪ್ರೌಢಶಾಲೆ ಪೆರಿಂಜೆ ದ್ವಿತೀಯ ಸ್ಥಾನ ಪಡೆಯಿತು. ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಪ್ರಥಮ ಸ್ಥಾನ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ದ್ವಿತೀಯ. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಪ್ರಥಮ, ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ದ್ವಿತೀಯ ಸ್ಥಾನ ಪಡೆಯಿತು. ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ವಿಜೇತರಿಗೆ ಶಾಲಾ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಪ್ರಶಸ್ತಿ ವಿತರಿಸಿ ಅಭಿನಂದಿಸಿದರು.

Related posts

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!