ಕಕ್ಕಿಂಜೆ: ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತರಬೇತಿ ಕಾರ್ಯಕ್ರಮವು ಆ. 02ರಂದು ಚಾರ್ಮಾಡಿ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಆಡಳಿತದಲ್ಲಿ ಮಕ್ಕಳು ಯೋಜನೆಯ ಅಂಗವಾಗಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಮಾತನಾಡಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಮಕ್ಕಳ ಹಕ್ಕುಗಳ ಒಡಂಬಡಿಕೆ, ಮಕ್ಕಳ ಹಕ್ಕುಗಳ ಗ್ರಾಮ ಸಭೆ, ಮಕ್ಕಳ ಹಕ್ಕುಗಳ ಸಂಘ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆ ಬಗ್ಗೆ ವಿವರಿಸಿ ನಮ್ಮ ಮಕ್ಕಳಿಗೆ ಸುಸ್ಥಿರ ಸಮಾಜ ನಿರ್ಮಾಣ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಆಡಳಿತದಲ್ಲಿ ಮಕ್ಕಳು ಯೋಜನೆಯ ಅಂಗವಾಗಿ ಹೊರತಂದಿರುವ ‘ಮಕ್ಕಳ ಹಕ್ಕುಗಳ ಗ್ರಾಮಸಭೆ’ ಮತ್ತು ‘ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು’ ಭಿತ್ತಿಪತ್ರಗಳನ್ನು ಪಂಚಾಯತ್ ಅಧ್ಯಕ್ಷ ಕೆ.ವಿ.ಪ್ರಸಾದ್ , ಉಪಾಧ್ಯಕ್ಷರಾದ ಶ್ರೀಮತಿ ಸುರೇಖಾ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ.ಜಿ ಹಾಗೂ ಸದಸ್ಯರು ಬಿಡುಗಡೆಗೊಳಿಸಿದರು.