25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

ವೇಣೂರು: ಟೆಲಿಗ್ರಾಂ ನಕಲಿ ಖಾತೆಯ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ಹಣವನ್ನು ವಸೂಲಿಗೈದಿದ್ದ ವಂಚಕನನ್ನು ವೇಣೂರು ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ ಹೆಬ್ಬಾರ್ (23) ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಅವರಿಗೆ ನಕಲಿ ಟೆಲಿಗ್ರಾಂ ಖಾತೆಯ ಮೂಲಕ ರೂ. ಮೂರು ಲಕ್ಷ ಕೊಡುವಂತೆ ಬೇಡಿಕೆ ಇಟ್ಟು ಹಣವನ್ನು ನೀಡದಿದ್ದರೆ ಗಂಡನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬಗ್ಗೆ ಜ್ಯೋತಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು. ಕಾರ್ಯಾಚರಣೆಗಿಳಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಆನಂದ ಎಂ. ಪೊಲೀಸರ ತಂಡ ಆ. 2ರ ಮಧ್ಯರಾತ್ರಿ ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿಂದ ಬಂಧಿಸಿದ್ದಾರೆ.

3 ಲಕ್ಷದ ಬದಲಿಗೆ ರೂ. ಒಂದು ಲಕ್ಷ ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂನಲ್ಲಿ ಒಪ್ಪಿಸಿ, ಅದರಂತೆ ಆರೋಪಿ ಆ. 2 ರಂದು ಸಂಜೆ ಅಳದಂಗಡಿ ಕೆದ್ದು ಸಮೀಪ ಹಣವನ್ನು ಎಸೆದು ಹೋಗುವಂತೆ ಸೂಚಿಸಿದ್ದ. ಬಳಿಕ ಅಲ್ಲಿ ಎಸೆಯಬೇಡಿ ಎಂದು ಸಂದೇಶ ರವಾಣಿಸಿ ಬೇರೊಂದು ಸ್ಥಳವನ್ನು ಸೂಚಿಸಿದ್ದ. ಹೀಗೆ ಮೂರ್‍ನಾಲ್ಕು ಬಾರಿ ಸ್ಥಳವನ್ನು ಬದಲಾಯಿಸುತ್ತಾ ಮೆಸೇಜ್ ಮಾಡುತ್ತಿದ್ದ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಬಿಸಾಡಿ ಹೋಗುವಂತೆ ತಿಳಿಸಿದ್ದು, ಅದರಂತೆ ಹಣದ ಕಟ್ಟನ್ನು ಬಿಸಾಡಿ ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಟ್ಟನ್ನು ಪಡೆದುಕೊಳ್ಳುವಷ್ಟರಲ್ಲಿ ಮೊದಲೇ ಕಾದುಕುಳಿತ್ತಿದ್ದ ಪೊಲೀಸರು ಹಿಡಿಯಲು ಯತ್ನಿಸಿದ್ದಾರೆ. ಆದರೆ ಅಚಾನಕ್ ಆಗಿ ತಪ್ಪಿಸಿಕೊಂಡಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನ ಅಣ್ಣನ ಮನೆ ಗುಂಡೇರಿ ಸಮೀಪ ದಸ್ತಗಿರಿ ಮಾಡಿ ಆತ ವಸೂಲಿ ಮಾಡಿದ್ದ ಒಂದು ಲಕ್ಷ ನಗದು, ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!