23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

ವೇಣೂರು: ಟೆಲಿಗ್ರಾಂ ನಕಲಿ ಖಾತೆಯ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ಹಣವನ್ನು ವಸೂಲಿಗೈದಿದ್ದ ವಂಚಕನನ್ನು ವೇಣೂರು ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ ಹೆಬ್ಬಾರ್ (23) ಪ್ರಕರಣದ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಅವರಿಗೆ ನಕಲಿ ಟೆಲಿಗ್ರಾಂ ಖಾತೆಯ ಮೂಲಕ ರೂ. ಮೂರು ಲಕ್ಷ ಕೊಡುವಂತೆ ಬೇಡಿಕೆ ಇಟ್ಟು ಹಣವನ್ನು ನೀಡದಿದ್ದರೆ ಗಂಡನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬಗ್ಗೆ ಜ್ಯೋತಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು. ಕಾರ್ಯಾಚರಣೆಗಿಳಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಆನಂದ ಎಂ. ಪೊಲೀಸರ ತಂಡ ಆ. 2ರ ಮಧ್ಯರಾತ್ರಿ ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿಂದ ಬಂಧಿಸಿದ್ದಾರೆ.

3 ಲಕ್ಷದ ಬದಲಿಗೆ ರೂ. ಒಂದು ಲಕ್ಷ ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂನಲ್ಲಿ ಒಪ್ಪಿಸಿ, ಅದರಂತೆ ಆರೋಪಿ ಆ. 2 ರಂದು ಸಂಜೆ ಅಳದಂಗಡಿ ಕೆದ್ದು ಸಮೀಪ ಹಣವನ್ನು ಎಸೆದು ಹೋಗುವಂತೆ ಸೂಚಿಸಿದ್ದ. ಬಳಿಕ ಅಲ್ಲಿ ಎಸೆಯಬೇಡಿ ಎಂದು ಸಂದೇಶ ರವಾಣಿಸಿ ಬೇರೊಂದು ಸ್ಥಳವನ್ನು ಸೂಚಿಸಿದ್ದ. ಹೀಗೆ ಮೂರ್‍ನಾಲ್ಕು ಬಾರಿ ಸ್ಥಳವನ್ನು ಬದಲಾಯಿಸುತ್ತಾ ಮೆಸೇಜ್ ಮಾಡುತ್ತಿದ್ದ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಬಿಸಾಡಿ ಹೋಗುವಂತೆ ತಿಳಿಸಿದ್ದು, ಅದರಂತೆ ಹಣದ ಕಟ್ಟನ್ನು ಬಿಸಾಡಿ ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಟ್ಟನ್ನು ಪಡೆದುಕೊಳ್ಳುವಷ್ಟರಲ್ಲಿ ಮೊದಲೇ ಕಾದುಕುಳಿತ್ತಿದ್ದ ಪೊಲೀಸರು ಹಿಡಿಯಲು ಯತ್ನಿಸಿದ್ದಾರೆ. ಆದರೆ ಅಚಾನಕ್ ಆಗಿ ತಪ್ಪಿಸಿಕೊಂಡಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನ ಅಣ್ಣನ ಮನೆ ಗುಂಡೇರಿ ಸಮೀಪ ದಸ್ತಗಿರಿ ಮಾಡಿ ಆತ ವಸೂಲಿ ಮಾಡಿದ್ದ ಒಂದು ಲಕ್ಷ ನಗದು, ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!