39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆ ಯವರೆಗೆ ಬೃಹತ್ ಸಮಾವೇಶ-ಜಾಥ ಹಾಗೂ ಹಕ್ಕೊತ್ತಾಯ ಮಂಡನೆಯು ಆ.4 ರಂದು ನಡೆಯಿತು.

ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾ| ಎಲ್.ಹೆಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.

ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ, ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಜಿರೆ ಜನಾರ್ದನ ದೇವಸ್ಥಾನ ದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಗೌಡ ಇಚ್ಚಿಲ, ಕಾಸಿಂ ಮಲ್ಲಿಗೆ ಮನೆ ಉಪಸ್ಥಿತರಿದ್ದರು.

ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಘ ಸಂಸ್ಥೆಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya
error: Content is protected !!