25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ಎಂಬವರ ಪತ್ನಿ ಕುಸುಮಾವತಿ (48ವ)ರವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.4 ರಂದು ದೂರು ನೀಡಿದ್ದಾರೆ.

ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ. 4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೆ. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya
error: Content is protected !!