September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ತಹಶೀಲ್ದಾರ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya
error: Content is protected !!