29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಬಂಟರ ಸಂಘ ಬೆಂಗಳೂರು ಇವುಗಳ ಸಹ ಭಾಗಿತ್ವದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಆ. 6ರಂದು ಬಂಟರ ಭವನ ಗುರುವಾಯನಕೆರೆ ಯಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು ವಹಿಸಿದರು.

ನಿಕಟಪೂರ್ವ ಲಯನ್ಸ್ ಜಿಲ್ಲಾ ರಾಜಪಾಲರಾದ ಸಂಜಿತ್ ಶೆಟ್ಟಿ ಉಧ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಯಾವಾಗಲು ಉದ್ಯೋಗಿಗಳಾದೆ ಉದ್ಯೋಗ ಕೊಡುವಂತವರು ಆಗಬೇಕು. ಉತ್ತಮ ಸಮಾಜ ನಿರೂಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, . ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯಂತ್ ಶೆಟ್ಟಿ,. ಉಜಿರೆ ಎಸ್ಡಿ ಎಮ್ ಕಾಲೇಜ್ ಪ್ರಾಂಶುಪಾಲ ಡಾ. ಬಿ ಎ ಕುಮಾರ್, ಸಂಚಾಲಕರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಸಂಜೀವ ಶೆಟ್ಟಿ, ಕೋಶಾಧಿಕಾರಿ ಕೆಎನ್ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ,. ಬಂಟರ ಯುವ ವಿಭಾಗದ ಅಧ್ಯಕ್ಷರಾದ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ಶೋಭಾ ವಿ ಶೆಟ್ಟಿ ಉಪಸ್ಥಿತರಿದ್ದರು .

ಸಂಘದ ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ವಸಂತ್ ಶೆಟ್ಟಿ ನಿರೂಪಿಸಿದರು.

Related posts

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya
error: Content is protected !!