ಮುಂಡಾಜೆ ಪ್ರೌಢಶಾಲೆ ಮುಂಡಾಜೆಯಲ್ಲಿ 2023- 24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮವು ಆ. 4ರಂದು ನಡೆಸಲಾಯಿತು.
ಕಾರ್ಯಕ್ರಮವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ ರಾವ್ ಕಲ್ಮಂಜ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಆಟಿ ತಿಂಗಳ ಮಹತ್ವ,ಆಟಿಯಲ್ಲಿ ಉಪಯೋಗಿಸುವ ತಿಂಡಿ ತಿನಿಸುಗಳು, ಸಂಪ್ರದಾಯಗಳು, ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಇದ್ದ ಕಷ್ಟದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿಯನ್ನು ನೀಡಿದರು.
ಮುಂಡಾಚೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ. ಇವರು ಶಾಲಾ ಸಂಸತ್ತಿನ ವಿದ್ಯಾರ್ಥಿ ನಾಯಕರುಗಳಿಗೆ ಪ್ರಮಾಣ ವಚನ ಬೋಧಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರರವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ನಾಯಕತ್ವದ ಗುಣ ಶಿಸ್ತಿನ ಜೀವನ ಸ್ವಚ್ಛತೆಯ ಬಗ್ಗೆ ಮಾಹಿತಿಯನ್ನು ನೀಡಿ ಆಟಿ ತಿಂಗಳ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ಇಂಗ್ಲಿಷ್ ಶಿಕ್ಷಕಿ ಶ್ರೀಮತಿ ಪಾರ್ವತಿಯು ನಿರೂಪಿಸಿ, ಕನ್ನಡ ಅಧ್ಯಾಪಕ ಆನಂದ ಜಿ ಸ್ವಾಗತಿಸಿ, ಸಮಾಜ ಶಿಕ್ಷಕಿ ಸಹನಾಯಿಯೂ ವಂದಿಸಿದರು. ಅಧ್ಯಾಪಕರಾದ ಸುರೇಶ್ ಎಂ. ಟಿ. , ಗುಣಪಾಲ್ ಎಂ ಎಸ್ , ಶಿಕ್ಷಕಿಯರಾದ ಶ್ರೀಮತಿ ಪದ್ಮಲತಾ, ವರ್ದಿನಿ, ಶ್ರೀಮತಿ ವಿಜಯಲಕ್ಷ್ಮಿ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ನಂತರ ವಿದ್ಯಾರ್ಥಿಗಳಿಂದ ತುಳು ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು ವಿದ್ಯಾರ್ಥಿಗಳು ಮತ್ತು ಹೆತ್ತವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.